ಆನೆಮಜಲು ನ್ಯಾಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

0

ಪುತ್ತೂರು: ಆನೆಮಜಲು ನ್ಯಾಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಸಿಗಳನ್ನು ನೆಡುವ ಮತ್ತು ವಿತರಿಸುವ ಕಾರ್ಯಕ್ರಮ ಜೂ.5ರಂದು ನಡೆಯಿತು.


ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ವಲಯ ಅರಣ್ಯ ಇಲಾಖೆ ಪುತ್ತೂರು ಇವರ ಸಹಕಾರದೊಂದಿಗೆ ನಡೆದ ಕಾರ್ಯಕ್ರಮದಲ್ಲಿ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಸುಮಂಗಲಾ, ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶೆ ಪ್ರಕೃತಿ ಕಲ್ಯಾಣ್‌ಪುರ, 1ನೇ ಹೆಚ್ಚುವರಿ ಹಿರಿಯ ವ್ಯವಹಾರಿಕ ನ್ಯಾಯಾಧೀಶ ದೇವರಾಜ್ ವೈ ಎಚ್, ಪ್ರಧಾನ ವ್ಯವಹಾರಿಕ ನ್ಯಾಯಾಧೀಶೆ ಶ್ವೇತಾ ಜೆ, ವಕೀಲರ ಸಂಘದ ಅಧ್ಯಕ್ಷ ಜಿ.ಜಗನ್ನಾಥ ರೈ, ವಲಯ ಅರಣ್ಯಾಧಿಕಾರಿ ಕಿರಣ್ ಬಿ.ಯಂ, ವಕೀಲರ ಸಂಘದ ಉಪಾಧ್ಯಕ್ಷ ಮೋನಪ್ಪ, ಪ್ರಧಾನ ಕಾರ್ಯದರ್ಶಿ ಚಿನ್ಮಯ್ ರೈ, ಖಜಾಂಚಿ ಮಹೇಶ್ ಕೆ ಸವಣೂರು, ಮಮತಾ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here