ಹಿರೇಬಂಡಾಡಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಹಿರೇಬಂಡಾಡಿ: ಸರ್ಕಾರಿ ಪ್ರೌಢಶಾಲೆ ಹಿರೇಬಂಡಾಡಿ ಇಲ್ಲಿ ಶಾಲಾ ವನಸಿರಿ ಇಕೋ ಕ್ಲಬ್, ಸಿ.ವಿ.ರಾಮನ್ ವಿಜ್ಞಾನ ಸಂಘ ಹಾಗೂ ಶೌರ್ಯ ವಿಪತ್ತು ತಂಡ ವಳಾಲು ಇದರ ಸಹಯೋಗದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.


ಹತ್ತನೇ ತರಗತಿ ವಿದ್ಯಾರ್ಥಿನಿ ನೌಫಿರಾ ವಿಶ್ವ ಪರಿಸರ ದಿನಾಚರಣೆಯ ಬಗ್ಗೆ ಮಾಹಿತಿ ನೀಡಿದರು. ವನಸಿರಿ ಇಕೋ ಕ್ಲಬ್‌ನ ಮಾರ್ಗದರ್ಶಿ ಶಿಕ್ಷಕ ಮನೋಹರ್ ಅವರು ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಕುರಿತು ಮಾಹಿತಿ ನೀಡಿದರು. ಮುಖ್ಯ ಶಿಕ್ಷಕರಾದ ಗಣಪತಿ ಭಟ್ ಮಾತನಾಡಿ, ಪರಿಸರ ಸಂರಕ್ಷಣೆಯ ಮಾರ್ಗದರ್ಶಿ ಸೂತ್ರಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು.


ವನಸಿರಿ ಇಕೋ ಕ್ಲಬ್ ವತಿಯಿಂದ ಶಾಲೆಗೆ ಹಣ್ಣಿನ ಗಿಡಗಳನ್ನು ನೀಡಲಾಯಿತು. ಶೌರ್ಯ ವಿಪತ್ತು ತಂಡ ವಳಾಲು ಬಜತ್ತೂರು ಘಟಕದ ಸದಸ್ಯರಾದ ಮಮತಾ ಮತ್ತು ತಂಡದವರು ಶಾಲಾ ಸುತ್ತಮುತ್ತಲಿನ ಖಾಲಿ ಜಾಗಗಳಲ್ಲಿ ಗಿಡ ನೆಡುವ ಮೂಲಕ ಶಾಲೆಯ ಸೌಂದರ್ಯೀಕರಣಕ್ಕೆ ತಮ್ಮ ಕೊಡುಗೆಯನ್ನು ನೀಡಿದರು. ಅಲ್ಲದೇ ಶೌರ್ಯ ತಂಡದವರು ಶಾಲಾ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಿದರು. ಶಾಲಾ ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here