







ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.


ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ ಗಿಡ ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಪರಿಸರದ ಮಹತ್ವ, ಮರ-ಗಿಡಗಳ ಉಳಿವು, ಜೀವಸಂಕುಲಗಳ ಮಹತ್ವ ಮತ್ತು ಜಾಗತಿಕ ತಾಪಮಾನದ ಏರಿಕೆ ಬಗ್ಗೆ ಮಕ್ಕಳಿಗೆ ಮನಮುಟ್ಟುವಂತೆ ವಿವರಿಸಿದರು. ಆಂಗ್ಲ ಮಾಧ್ಯಮದ ಮುಖ್ಯಗುರು ನಾರಾಯಣ ಭಟ್ ಪರಿಸರವನ್ನು ನಾವು ಉಳಿಸಿ ಬೆಳೆಸಿ ಸ್ವಚ್ಛವಾಗಿಟ್ಟು, ಮುಂದಿನ ತಲೆಮಾರಿಗೆ ಉತ್ತಮ ಕಾಣಿಕೆಯಾಗಿ ನೀಡಬೇಕೆಂದರು. ಕನ್ನಡ ಮಾಧ್ಯಮದ ಮುಖ್ಯಗುರು ವಿನಯ ವಿ ಶೆಟ್ಟಿ ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಸ್ವಾಗತಿಸಿದರು. ಸಹ ಆಡಳಿತ ಅಧಿಕಾರಿ ಹೇಮನಾಗೇಶ್ ರೈ, ಹಿರಿಯ ಶಿಕ್ಷಕಿ ಸವಿತಾ ಕೆ ಉಪಸ್ಥಿತರಿದ್ದರು. ಇಕೋ ಕ್ಲಬ್ ನ ನಿರ್ದೇಶಕರುಗಳಾದ ಅಶೋಕ್ ಕುಮಾರ್, ವಿಮಲ ಸಿ ಎಚ್, ಚಿತ್ರಕಲಾ ಟಿ, ಶಶಿಕಲಾ ಮತ್ತು ಜಯಶೀಲ ಕೆ ಕಾರ್ಯಕ್ರಮವನ್ನು ಸಂಘಟಿಸಿದರು.













