







ಪುತ್ತೂರು: 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಯುಜಿ-ಸಿಇಟಿ-26) ಫಲಿತಾಂಶವನ್ನು ಶನಿವಾರ, ಜೂನ್ 6ರಂದು ಮಧ್ಯಾಹ್ನ 12:00 ಗಂಟೆಗೆ ಪ್ರಕಟಿಸಲಾಗುವುದು.


ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಹ ಅಧ್ಯಕ್ಷರೂ, ವೈದ್ಯಕೀಯ ಶಿಕ್ಷಣ ಸಚಿವರೂ ಆದ ಡಾ. ಶರಣಪ್ರಕಾಶ ಆರ್. ಪಾಟೀಲ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಟು ಗೋಯಲ್, ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ, ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಉಪಸ್ಥಿತರಿರುವರು.




ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದು.









