







ಪುತ್ತೂರು: ಕಬಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಆರಂಭೋತ್ಸವ ಅದ್ದೂರಿಯಾಗಿ ನಡೆಯಿತು.


ಕಬಕ ಗ್ರಾಮ ಪಂಚಾಯಿತಿ ನಾಗರಿಕ ಸೇವಾ ಸಮಿತಿಯ ಅಧ್ಯಕ್ಷ ಶಾಬಾ ಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹೊಸ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಉನ್ನತ ಗುರಿಗಳನ್ನು ಹೊಂದಿ ಆತ್ಮವಿಶ್ವಾಸದಿಂದ ಸಾಧನೆಯುಕ್ತ ಮುನ್ನಡೆಯಬೇಕು ಎಂದು ಶುಭ ಹಾರೈಸಿದರು.ಶಾಲಾ ಎಸ್ಡಿಎಂಸಿ ಅಧ್ಯಕ್ಷ ಇಂತಿಯಾಜ್ ಅಧ್ಯಕ್ಷತೆ ವಹಿಸಿ ಶುಭ ಕೋರಿದರು. ಮುಖ್ಯಶಿಕ್ಷಕಿ ಜೆನೆಟ್ ಡೇಝಿ ಸಿಕ್ವೇರಾ ಸ್ವಾಗತಿಸಿದರು. ಶಿಕ್ಷಕಿ ಗೋದಾವರಿ ಟಿ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಫ್ಲಾವಿಯಾ ಸಿಲ್ವಿನ್ ಮೊಂತೆರೋ ಕಾರ್ಯಕ್ರಮ ನಿರೂಪಿಸಿದರು.




ಶಿಕ್ಷಕಿಯರಾದ ಸೌಮ್ಯ ಹಾಗೂ ರಾಣಿ ಟೀಚರ್ ಪೋಷಕರ ಸಹಿ ಪಡೆದರು. ಶಿಕ್ಷಕಿ ವಿಜಯಲಕ್ಷ್ಮಿ ವಂದನಾರ್ಪಣೆ ಸಲ್ಲಿಸಿದರು.ಸಮಾರಂಭದಲ್ಲಿ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ, ಪೆನ್ನು, ಪೆನ್ಸಿಲ್ ಹಾಗೂ ಸಮವಸ್ತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಎಸ್ಡಿಎಂಸಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು, ಎಲ್ಕೆಜಿ-ಯುಕೆಜಿ ಶಿಕ್ಷಕರು, ಸಹಾಯಕಿ ಸವಿತಾ ಮತ್ತು ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು. ನೂತನ ಶೈಕ್ಷಣಿಕ ವರ್ಷದ ಆರಂಭವನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು.










