







ವಿಟ್ಲ: ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಸಂಸ್ಥಾಪಕ ಅಧ್ಯಕ್ಷ ಬಿ. ಗುಣರಂಜನ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಜೂ.5ರ ಶುಕ್ರವಾರ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ವಿತರಣೆ ಮತ್ತು ನೆಡುವ ಕಾರ್ಯಕ್ರಮ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯಿತು.



ಪ್ರಕೃತಿಯನ್ನು ಉಳಿಸಿ ಮುಂದಿನ ಪೀಳಿಗೆಗೆ ಮಾದರಿಯಾಗುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಮೆಡಿಕಲ್ ಆಫೀಸರ್ ಡಾ. ಶಮನ್ ಜೆ ಶೆಟ್ಟಿ ಅವರಿಗೆ ಗಿಡ ವಿತರಿಸಲಾಯಿತು. ವಿಟ್ಲ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪ್ರಕಾಶ್ ದೇವಾಡಿಗ ಅವರಿಗೆ ಗಿಡ ನೀಡಿ, ಬಳಿಕ ಠಾಣೆಯ ಆವರಣದಲ್ಲಿ ಗಿಡ ನೆಡಲಾಯಿತು.




ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಂಚಾಲಕ ರಾಮದಾಸ್ ಶೆಟ್ಟಿ, ಜಿಲ್ಲಾಧ್ಯಕ್ಷ ಕಾರ್ತಿಕ್ ರೈ, ಲಯನ್ಸ್ ಜಿಲ್ಲೆ 317ರ ಜಿಲ್ಲಾ ಸಂಪರ್ಕ ಅಧಿಕಾರಿ ಲ. ಸುದರ್ಶನ್ ಪಡಿಯಾರ್, ಸುದೀಪ್ ಕುಮಾರ್ ಶೆಟ್ಟಿ, ಪ್ರಭಾಕರ್ ಅಮೈ, ತೌಸೀಫ್ ವಿಟ್ಲ, ರಾಜೀವ್, ಪ್ರವೀಣ್ ನಾಯ್ಕ್, ಅಶ್ವಿನಿ ಪೆರುವಾಯಿ, ಉಬೇದ್ ವಿಟ್ಲ, ಅಬುಬಕ್ಕರ್ ಅನಿಲಕಟ್ಟೆ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.











