







ಪುತ್ತೂರು: ಬೆಟ್ಟಂಪಾಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ|ಅಬ್ದುಲ್ ರಝಾಕ್ ಕೆ. ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪರಿಸರ ದಿನಾಚರಣೆಯ ಮಹತ್ವ ತಿಳಿಸಿ, ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.


ಇಕೋ ಕ್ಲಬ್ ಸಂಯೋಜಕರಾದ ಜೀವಶಾಸ್ತ್ರ ಉಪನ್ಯಾಸಕಿ ಗಾಯತ್ರಿ ಎಂ. ಸ್ವಾಗತಿಸಿ, ವಾಣಿಜ್ಯಶಾಸ್ತ್ರ ಉಪನ್ಯಾಸಕಿ ರಶ್ಮಿ ಬಿ. ವಂದಿಸಿದರು. ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.













