ಅಂಕತಡ್ಕ ಸರ್ಕಾರಿ ಶಾಲೆಯಲ್ಲಿ ಖಾಯಂ ಶಿಕ್ಷಕರೇ ಇಲ್ಲ : ಬಿಸಿಯೂಟ ಇಲ್ಲದೇ ವಿದ್ಯಾರ್ಥಿಗಳ ಪರದಾಟ!

0

ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ; ಪ್ರತಿಭಟನೆಯ ಎಚ್ಚರಿಕೆ

ಸವಣೂರು: ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಅಂಕತಡ್ಕದಲ್ಲಿರುವ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿರುವ ಶಿಕ್ಷಕರ ಕೊರತೆಯನ್ನು ಶೀಘ್ರ ಬಗೆಹರಿಸುವಂತೆ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 1 ರಿಂದ 7 ನೇ ತರಗತಿಯವರೆಗೆ 24 ವಿದ್ಯಾರ್ಥಿಗಳು ದಾಖಲಾಗಿದ್ದು, ಕೇವಲ‌ ಒಬ್ಬರೇ ಅಥಿತಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಭಾರ ಮುಖ್ಯೋಪಾದ್ಯಾಯರನ್ನು ಬೇರೆ ಶಾಲೆಗೆ ವರ್ಗಾಯಿಸಲಾಗಿದ್ದು, ಶಾಲೆಯಲ್ಲಿ ಯಾವುದೇ ಖಾಯಂ ಶಿಕ್ಷಕರು ಇರುವುದಿಲ್ಲ. ಇದರಿಂದ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗಿದ್ದಾರೆ.

ಶಾಲೆಯಲ್ಲಿ ಖಾಯಂ ಶಿಕ್ಷಕರು ಇಲ್ಲದ ಕಾರಣ ವಿದ್ಯಾರ್ಥಿಗಳ ಬಿಸಿಯೂಟಕ್ಕೂ ಸಮಸ್ಯೆಯಾಗುತ್ತಿದ್ದು, ಬಿಸಿಯೂಟಕ್ಕಾಗಿ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ಎದುರಾಗಿದೆ.

ಈ‌‌ ಎಲ್ಲಾ‌‌ ಸಮಸ್ಯೆಗಳನ್ನು ಶೀಘ್ರ ಪರಿಹರಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಎಸ್‌ಡಿಎಂಸಿ‌ ಸದಸ್ಯರು, ಪೋಷಕರು ಮನವಿ‌‌ ಮಾಡಿದ್ದು,‌‌ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿದ್ದಾರೆ.

LEAVE A REPLY

Please enter your comment!
Please enter your name here