






ರಾಮಕುಂಜ: ಶ್ರೀ ರಾಮಕುಂಜೇಶ್ವರ ವಿದ್ಯಾಲಯದಲ್ಲಿ ಜೂ.5ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.



ಶಾಲೆಯ ಪ್ರಾಂಶುಪಾಲರಾದ ಪ್ರವಿದ್ ಪಿ., ಪರಿಸರ ದಿನಾಚರಣೆಯ ಮಹತ್ವದ ಕುರಿತು ಮಾಹಿತಿ ನೀಡಿ, ಪರಿಸರ ಸಂರಕ್ಷಣೆ, ಮರಗಳ ಅಗತ್ಯತೆ ಹಾಗೂ ಹಸಿರು ಪರಿಸರದ ಮಹತ್ವವನ್ನು ವಿವರಿಸಿ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿಯನ್ನು ಮೂಡಿಸಿದರು.



ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಾಲಾ ಆವರಣದಲ್ಲಿ ಪ್ರತಿ ತರಗತಿಗೆ ಒಂದೊಂದು ಮರವನ್ನು ನೆಡುವ ಜವಾಬ್ದಾರಿಯನ್ನು ವಹಿಸಲಾಯಿತು. ವಿದ್ಯಾರ್ಥಿಗಳು ತಮ್ಮ ತರಗತಿಗೆ ನೀಡಲಾದ ಮರಗಳ ಆರೈಕೆ ಮತ್ತು ಸಂರಕ್ಷಣೆಯ ಹೊಣೆ ಹೊತ್ತು ಪರಿಸರ ಜಾಗೃತಿ ಹಾಗೂ ಜವಾಬ್ದಾರಿತನವನ್ನು ಬೆಳೆಸಿಕೊಳ್ಳುವಂತೆ ಪ್ರೋತ್ಸಾಹಿಸಲಾಯಿತು. ವಿಕ್ರಾಂತ್ ತಂಡದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸಹಕರಿಸಿದರು. ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರಾದ ಗೀತಾ, ಪ್ರತೀಕ್ಷ ಆಳ್ವ ಅವರ ಸಹಕಾರದೊಂದಿಗೆ ಕಾರ್ಯಕ್ರಮ ನೆರವೇರಿತು.










