ಉಪ್ಪಿನಂಗಡಿ ಸೇರಿದಂತೆ ಜಿಲ್ಲೆಯ ಹಲವು ಕಡೆ ಕಳವು ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ

0

ಉಪ್ಪಿನಂಗಡಿ: ಪೂಂಜಾಲಕಟ್ಟೆ, ಉಪ್ಪಿನಂಗಡಿ ಸೇರಿದಂತೆ ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದು, 23,67,000 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಮೂಲತಃ ಬಂಟ್ವಾಳ ಕೊಳ್ನಾಡು ನಿವಾಸಿಗಳಾದ ಹಮೀದ್ ಹಾಗೂ ಅಬ್ದುಲ್ ಜಾಬೀರ್ ಯಾನೆ ಜಾಬೀ (35) ಎಂದು ಗುರುತಿಸಲಾಗಿದೆ. ಇವರು ಪ್ರಸ್ತುತ ಕಾಸರಗೋಡಿನಲ್ಲಿ ವಾಸವಿದ್ದರು. ಕಳೆದ ಎ.5ರಂದು ಪೂಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಹಮೀದ್‌ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಆತನ ವಿಚಾರಣೆಯಿಂದ ಜಾಬೀರ್ ಕೃತ್ಯದಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ.

ಆರೋಪಿಗಳಿಂದ ಪೂಂಜಾಲಕಟ್ಟೆ ಪ್ರಕರಣದ 68.690 ಗ್ರಾಂ ಚಿನ್ನಾಭರಣ ಹಾಗೂ 2,00,000 ರೂ. ನಗದು, ಉಪ್ಪಿನಂಗಡಿ ಪ್ರಕರಣದ 21.810 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ಸೊತ್ತಿನ ಮೌಲ್ಯ 23,67,000 ರೂ.ಈ ಇಬ್ಬರು ಆರೋಪಿಗಳು ಉಪ್ಪಿನಂಗಡಿ, ಬಂಟ್ವಾಳ ನಗರ ಹಾಗೂ ಬೆಳ್ತಂಗಡಿ ಠಾಣೆಗಳಲ್ಲಿ ತಲಾ ಒಂದೊಂದು ಪ್ರಕರಣ ಸೇರಿದಂತೆ ಒಟ್ಟು 5 ಪ್ರಕರಣಗಳಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬೆಳ್ತಂಗಡಿ ಉಪವಿಭಾಗಾಧೀಕ್ಷಕಿ ರೋಹಿಸಿ ಸಿ.ಕೆ ನೇತೃತ್ವದಲ್ಲಿ ಬೆಳ್ತಂಗಡಿ ಗ್ರಾಮಾಂತರ ಸಿಪಿಐ ರವಿ ಬಿ.ಎಸ್, ಉಪ್ಪಿನಂಗಡಿ ಸಿಪಿಐ ನಾಗರಾಜ್ ಹೆಚ್.ಇ., ಪುಂಜಾಲಕಟ್ಟೆ ಪಿಎಸ್‌ಐ ರಾಜೇಶ್ ಕೆ.ವಿ., ಎಎಸ್‌ಐ ಬೆನ್ನಿಚ್ಚನ್, ಸುಂದರ ಶೆಟ್ಟಿ, ವಿಶ್ವನಾಥ್ ನಾಯ್ಕ್, ಪ್ರವೀಣ್ ಮೂರುಗೋಳಿ, ರಾಜೇಶ್ ಎನ್, ವಿಜಯ್ ಕುಮಾರ್ ರೈ, ರಾಹುಲ್ ರಾವ್, ಸಂತೋಷ್, ಬಸವರಾಜ್, ರಜಿತ್, ನಾಗರಾಜ್ ಹಾಗೂ ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್, ಸಂಪತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here