







ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಗ್ರಾಮ ಸಮಿತಿ ಪಡ್ನೂರ್ ಮತಾವು ಇದರ ವಾರ್ಷಿಕ ಮಹಾಸಭೆ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಜೂ.7ರಂದು ಮಧ್ಯಾಹ್ನ ವಿವೇಕಾನಂದ ಕಾಲೇಜು ರಸ್ತೆಯ ಶ್ರೀದೇವಿ ಕಾಂಪ್ಲೆಕ್ಸ್ ಇಲ್ಲಿ ರವಿಚಂದ್ರ ಪೂಜಾರಿ ಪಡ್ಡಾಯೂರು ಇವರ ಅಧ್ಯಕ್ಷತೆಯಲ್ಲಿ ನೆರವೇರಿತು.



ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪಡ್ನೂರು ಬಿಲ್ಲವ ಗ್ರಾಮ ಸಮಿತಿಯು ತಾಲೂಕು ಬಿಲ್ಲವ ಸಂಘದ ಜೊತೆ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಕೈ ಜೋಡಿಸುತ್ತಾ ಬಂದಿರುವುದು ಶ್ಲಾಘನೀಯ ಎಂದರು.



ಸಭಾಧ್ಯಕ್ಷರಾದ ರವಿಚಂದ್ರ ಪೂಜಾರಿ ಪಡ್ಡಾಯೂರು ಮಾತನಾಡಿ, ಪ್ರತಿ ಕಾರ್ಯಕ್ರಮಗಳಲ್ಲಿ ನಮ್ಮ ಗ್ರಾಮ ಸಮಿತಿಯವರು ಹೆಚ್ಚು ಹೆಚ್ಚು ಭಾಗಿಯಾಗಿ ಪಡ್ನೂರು ಬಿಲ್ಲವ ಗ್ರಾಮ ಸಮಿತಿಯನ್ನು ಅತ್ಯಂತ ಬಲಿಷ್ಠ ಗ್ರಾಮ ಸಮಿತಿಯನ್ನಾಗಿ ಮಾಡಬೇಕೆಂದು ಸಮಾಜ ಬಾಂಧವರಲ್ಲಿ ವಿನಂತಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಬಿಲ್ಲವ ಸಂಘದ ಉಪಾಧ್ಯಕ್ಷ ಚಿದಾನಂದ ಸುವರ್ಣ, ಉಪಾಧ್ಯಕ್ಷೆ ಪುಷ್ಪಾವತಿ ಕೇಕುಡೆ, ಜೊತೆ ಕಾರ್ಯದರ್ಶಿ ಪುರುಷೋತ್ತಮ ಹಳೇನೆರಂಕಿ, ಪಡ್ನೂರು ಬಿಲ್ಲವ ಗ್ರಾಮ ಸಮಿತಿಯ ಉಪಾಧ್ಯಕ್ಷ ಗೋಪಾಲಕೃಷ್ಣ, ಟ್ರಸ್ಟ್ ಅಧ್ಯಕ್ಷ ವಾಸು ಪೂಜಾರಿ ಕೊಡಂಗೆ, ಮಹಿಳಾ ವೇದಿಕೆ ಅಧ್ಯಕ್ಷೆ ಸವಿತಾ ಸಾಲಿಯನ್, ಮಾಜಿ ಅಧ್ಯಕ್ಷ ಸಾಂತಪ್ಪ ಪೂಜಾರಿ ಅಂಡೆಪುಣಿ ಉಪಸ್ಥಿತರಿದ್ದರು. ಗ್ರಾಮ ಸಮಿತಿಯ ಪದಾಧಿಕಾರಿಗಳಾದ ಮಧುಸೂದನ್ ಪಡ್ಡಾಯೂರು, ದಾಮೋದರ್ ಪೂಜಾರ್ ನೆಲಪ್ಪಾಲು, ಮನೋಹರ್ ಅರುವಾರ, ಜಗನ್ನಾಥ್ ಪೂಜಾರಿ, ನಾರಾಯಣ ಪೂಜಾರಿ ನೆಲಪಾಲ್ ಸಹಿತ ಅನೇಕ ಹಿರಿಯರು ಕಿರಿಯರು, ಮಹಿಳೆಯರು ಭಾಗವಹಿಸಿದ್ದರು. ಗೌತಮ್ ಪೂಜಾರಿ ನೆಲಪಾಲ್ ಸ್ವಾಗತಿಸಿ, ಕಾರ್ಯದರ್ಶಿ ಪದ್ಮಪ್ಪ ಪೂಜಾರಿ ವರದಿ ವಾಚನ ಮತ್ತು ಲೆಕ್ಕಪತ್ರ ಮಂಡಿಸಿದರು. ರಕ್ಷಿತಾ ಮೋಹನ್ ಪಡ್ಡಾಯೂರು ಕಾರ್ಯಕ್ರಮ ನಿರೂಪಿಸಿದರು. ತ್ರಿಷಾ ಪಡ್ಡಾಯೂರು ಮತ್ತು ನಿಯತಿ ಪಡ್ಡಾಯೂರು ಪ್ರಾರ್ಥಿಸಿದರು. ಟ್ರಸ್ಟ್ ಕಾರ್ಯದರ್ಶಿ ವಿಮಲಾ ಸುರೇಶ್ ವಂದಿಸಿದರು.
ಸಾಧಕರಿಗೆ ಸನ್ಮಾನ..
ಕಾರ್ಯಕ್ರಮದಲ್ಲಿ ಸಾಮಾಜಿಕವಾಗಿ ರಾಜಕೀಯವಾಗಿ ಸಂಘಟಕರಾಗಿ ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ಪಾತ್ರರಾಗಿರುವ ಮತ್ತು ಮಹಾ ರಕ್ತದಾನಿಯಾಗಿ 2024-25 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ತಾಲೂಕು ಬಿಲ್ಲವ ಸಂಘದ ಕಾರ್ಯದರ್ಶಿಯಾದ ಬಿ.ಟಿ ಮಹೇಶ್ಚಂದ್ರ ಸಾಲಿಯಾನ್ ರವರನ್ನು ಹಾಗೂ ಸಾಮಾಜಿಕವಾಗಿ ರಾಜಕೀಯವಾಗಿ ಅನೇಕ ಸಮಾಜಮುಖಿ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಾ 2025-26ನೇ ಸಾಲಿನಲ್ಲಿ ಮದಗ ಶ್ರೀ ದೇವಸ್ಥಾನ ಕುಂಜಾರು ಇದರ ವ್ಯವಸ್ಥಾಪನಾ ಸಮಿತಿಗೆ ಆಯ್ಕೆಯಾಗಿರುವ ಯುವ ನಾಯಕ ರೋಹನ್ ರಾಜ್ ಪಟ್ಟೆರವರುಗಳನ್ನು ಸನ್ಮಾನಿಸಲಾಯಿತು.
ಪುಸ್ತಕ ವಿತರಣೆ..
2025-26ನೇ ಸಾಲಿನ ಶೈಕ್ಷಣಿಕ ಕ್ಷೇತ್ರದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿರುವ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಎಲ್.ಕೆ.ಜಿಯಿಂದ ಪದವೀಧರ ಫಲಾನುಭವಿ 82 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆಯನ್ನು ಮಾಡಲಾಯಿತು.










