







ಆಲಂಕಾರು: ಭಾರತದ ಪ್ರದಾನ ಮಂತ್ರಿಯಾಗಿ ಸತತ 4399 ದಿನಗಳ ನಿರಂತರವಾಗಿ ಜನಸೇವೆ ಸಲ್ಲಿಸಿ ಐತಿಹಾಸಿಕ ದಾಖಲೆ ನಿರ್ಮಿಸಿರುವ ಪ್ರಧಾನಿ ಹೆಸರಿನಲ್ಲಿ ಬಿಜೆಪಿ ಕುಟ್ರುಪಾಡಿ ಶಕ್ತಿ ಕೇಂದ್ರದ ವತಿಯಿಂದ ಕೇಪು ಶ್ರೀ ಲಕ್ಷ್ಮೀ ಜನಾರ್ದನ ಸ್ವಾಮಿ ದೇವಸ್ಥಾನ ಮತ್ತು ಶ್ರೀ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಲಾಯಿತು.



ಭಾರತ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಅವರ ಸತತ 4398 ದಿನಗಳ ಆಡಳಿತ ದಾಖಲೆಯನ್ನು ದಾಟಿ ಅತ್ಯಂತ ದೀರ್ಘವಾದಿಗೆ ಸತತವಾಗಿ ದೇಶ ಮುನ್ನಡೆಸಿದ ಹೆಗ್ಗಳಿಕೆಗೆ ಪಾತ್ರವಾಗಿರುವ ಮೋದಿಯವರ ಆರೋಗ್ಯ ಆಯುಷ್ಯ ವೃದ್ಧಿಗಾಗಿ ಮತ್ತು ದೇಶವನ್ನು ಮತ್ತಷ್ಟು ಪ್ರಗತಿಯತ್ತ ಕೊಂಡೊಯ್ಯಲು ಅವರಿಗೆ ಭಗವಂತನು ಹೆಚ್ಚಿನ ಶಕ್ತಿ ನೀಡಲಿ ಎಂದು ವಿಶೇಷ ಪೂಜೆ ಸಲ್ಲಿಸಲಾಯಿತು. ಕುಟ್ರುಪಾಡಿ ಮಹಾ ಶಕ್ತಿ ಕೇಂದ್ರ ಅಧ್ಯಕ್ಷ ಸುರೇಶ್ ದೇಂತಾರ್, ಪುತ್ತೂರು ತಾಲ್ಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಪುಲಸ್ತ್ಯ ರೈ, ಕುಟ್ರುಪಾಡಿ ಶಕ್ತಿ ಕೇಂದ್ರ ಪ್ರಮುಖ ಕಿರಣ್ ಗೋಗಟೆ ಬೂತ್ ಅಧ್ಯಕ್ಷ ದಯಾನಂದ ಪುರಿಯ ಕಾರ್ಯಕರ್ತರಾದ ಬಾಲಕೃಷ್ಣ ಗೌಡ ಸೂರಪ್ಪ ಗೌಡ ಉಳಿಪ್ಪು ಹಾಗೂ ಇನ್ನಿತರರು ಉಪಸ್ಥಿತರಿದ್ದರು.












