ಪೋಕ್ಸೋ ಪ್ರಕರಣ : ವಾರಂಟ್ ಆರೋಪಿಯ ಬಂಧನ

0

ಪುತ್ತೂರು:ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು
ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.

ನರಿಮೊಗರು ನಿವಾಸಿ ನಮನ್ ನಾಯಕ್ (32ವ.)ಬಂಧಿತ ಆರೋಪಿ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ 448, 506, 354 ಐಪಿಸಿ ಕಲಂ 12ರಲ್ಲಿ ದಾಖಲಾಗಿದ್ದ ಪ್ರಕರಣ(ಅ.ಕ್ರ.53/22018)ದಲ್ಲಿ ಆರೋಪಿಯಾಗಿರುವ ನಮನ್ ನಾಯಕ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯ ಆರೋಪಿ ವಿರುದ್ಧ ವಾರಂಟ್ ಜಾರಿ ಮಾಡಿತ್ತು. ಪುತ್ತೂರು ನಗರ ಠಾಣೆ ಪೊಲೀಸರು ಬೆಂಗಳೂರಿನ ಕೂಡ್ಲುಪೇಟೆ ಎಂಬಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here