






ನೆಲ್ಯಾಡಿ: ಇಚ್ಲಂಪಾಡಿ ನೇರ್ಲ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳ ಉದ್ಘಾಟನೆ ಜೂ.10ರಂದು ನಡೆಯಿತು.


ತರಗತಿ ಉದ್ಘಾಟಿಸಿ ಮಾತನಾಡಿದ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾದ ಭಾಸ್ಕರ ಎಸ್.ಗೌಡ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಶಾಲಾಭಿವೃದ್ಧಿ ಸಮಿತಿ ಮಾಡುತ್ತಿರುವ ಪ್ರಯತ್ನಗಳು ಶ್ಲಾಘನೀಯ. ಶಾಲೆಯ ಪ್ರತಿಯೊಂದು ಅಭಿವೃದ್ಧಿ ಕೆಲಸಗಳಿಗೆ ಸಹಕಾರ ನೀಡುವುದಾಗಿ ಹೇಳಿದರು. ತಾ.ಪಂ.ಮಾಜಿ ಅಧ್ಯಕ್ಷೆ ಕೆ.ಟಿ.ವಲ್ಸಮ್ಮ ಸಭಾ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.



ಕೌಕ್ರಾಡಿ ಗ್ರಾ.ಪಂ.ಮಾಜಿ ಸದಸ್ಯೆ ಡೈಸಿ ವರ್ಗಿಸ್, ಕೆ.ಡಿ.ಪಿ. ಸಮಿತಿ ಸದಸ್ಯ ಗಿರೀಶ್ ಸಾಲಿಯಾನ್, ಕಡಬ ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯ ಸತೀಶ್ ಪಳಿಕೆ, ನಿವೃತ್ತ ಮುಖ್ಯಗುರು ಶಾಂತಿ ವಿ.ಭಟ್ ಶುಭ ಹಾರೈಸಿದರು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ವಸಂತ ಬಿಜೇರು ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಪಿ.ಪಿ.ಜೋಯ್ ಅವರು ಎಲ್‌ಕೆಜಿ ಮತ್ತು ಯುಕೆಜಿಗೆ ಸೇರ್ಪಡೆಗೊಂಡ ಮಕ್ಕಳಿಗೆ ಪುಸ್ತಕ ಖರೀದಿಗೆ 7200 ರೂ. ಧನಸಹಾಯವನ್ನು ಈ ಸಂದರ್ಭದಲ್ಲಿ ಹಸ್ತಾಂತರಿಸಿದರು. ಶಾಲಾ ಮುಖ್ಯಶಿಕ್ಷಕರಾದ ಡಾ.ಗಿರೀಶ್ ಹೆಚ್.ಎಂ. ಸ್ವಾಗತಿಸಿದರು. ಶಿಕ್ಷಕಿ ಸೌಮ್ಯ ವಂದಿಸಿದರು. ಶಿಕ್ಷಕಿ ಆಥಿರಾ ಕಾರ್ಯಕ್ರಮ ನಿರೂಪಿಸಿದರು.










