ಹಾರಾಡಿ ರೈಲ್ವೇ ಬ್ರಿಡ್ಜ್ ಕೆಳಗೆ ರಸ್ತೆ ಕಾಂಕ್ರಿಟೀಕರಣ : ಪರ್ಯಾಯ ರಸ್ತೆಗೆ ಪಿಡಬ್ಲ್ಯೂಡಿಯಿಂದ ಎ.ಸಿ.ಗೆ ಪ್ರಸ್ತಾವನೆ

0

ಪುತ್ತೂರು:ಬೊಳುವಾರಿನಿಂದ ಸೇಡಿಯಾಪು ತನಕ ಚತುಷ್ಪಥ ಕಾಂಕ್ರಿಟೀಕರಣ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಈಗಾಗಲೇ ಬೊಳುವಾರು ಮತ್ತು ಹಾರಾಡಿ ಸಮೀಪ ಅಲ್ಲಲ್ಲಿ ಕಾಂಕ್ರಿಟೀಕರಣ ಕಾಮಗಾರಿ ನಡೆಯುತ್ತಿದ್ದು ಇದೀಗ ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿ ಕಾಂಕ್ರೀಟ್ ರಸ್ತೆ ಕಾಮಗಾರಿಗಾಗಿ ರಸ್ತೆ ಬಂದ್ ಮಾಡುವ ನಿಟ್ಟಿನಲ್ಲಿ ಪರ್ಯಾಯ ರಸ್ತೆಗೆ ಲೋಕೋಪಯೋಗಿ ಇಲಾಖೆಯಿಂದ ಸಹಾಯಕ ಕಮಿಷನರ್ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.


ಹಾರಾಡಿ ರೈಲ್ವೆ ಸೇತುವೆಯ ಕೆಳ ಭಾಗ ರಸ್ತೆ ಕಾಂಕ್ರಿಟೀಕರಣದ ಕಾಮಗಾರಿ ಪ್ರಾರಂಭ ಮಾಡುವ ಸಂದರ್ಭ ರಸ್ತೆ ಕಿರಿದಾಗಿದ್ದು ದ್ವಿಮುಖ ವಾಹನ ಸಂಚಾರ ಅಸಾಧ್ಯವಾಗಿದೆ.ಈ ಕಾರಣ ಜೂ.15ರಿಂದ ಜು.15ರವರೆಗೆ ಘನ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಬೇಕಾಗಿದೆ.ಪುತ್ತೂರಿನಿಂದ ಉಪ್ಪಿನಂಗಡಿ ಭಾಗಕ್ಕೆ ಸಂಚರಿಸುವ ವಾಹನಗಳು ಖಾಸಗಿ ಬಸ್ ನಿಲ್ದಾಣ ಮಾರ್ಗವಾಗಿ ಕೊಟೇಚಾ ಹಾಲ್ ಮುಖಾಂತರ ಉಪ್ಪಿನಂಗಡಿ ರಸ್ತೆಯನ್ನು ಸಂಪರ್ಕಿಸುವುದು. ಉಪ್ಪಿನಂಗಡಿಯಿಂದ ಪುತ್ತೂರು ಭಾಗಕ್ಕೆ ಸಂಚರಿಸುವ ವಾಹನಗಳು ಕೊಟೇಚಾ ಹಾಲ್ ಎ.ಪಿ.ಎಮ್.ಸಿ ರಸ್ತೆಯಾಗಿ ಪುತ್ತೂರು ಮುಖ್ಯ ರಸ್ತೆಯನ್ನು ಸಂಪರ್ಕಿಸಬೇಕೆಂದು ಪ್ರಸ್ತಾವನೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here