ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ

0

ಪುತ್ತೂರು : 2026-27 ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ ಜೂ.15ರದಂದು ಚುನಾವಣೆಯ ಮೂಲಕ ನಡೆಯಿತು.


ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ವಿಜ್ಞಾನ ವಿಭಾಗದ ಶ್ರೀಶನ್ ಡಿ.ಕೆ., ಕಾರ‍್ಯದರ್ಶಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಕನ್ನಿಕ ಜೆ. ಆರ್. , ಜೊತೆ ಕಾರ‍್ಯದರ್ಶಿಯಾಗಿ ಪ್ರಥಮ ವಿಜ್ಞಾನ ವಿಭಾಗದ ಜೆ. ಶೃಜ ಚುನಾಯಿತರಾದರು.ಕ್ರೀಡಾ ಸಂಘದ ಅಧ್ಯಕ್ಷರಾಗಿ ದ್ವಿತೀಯ ವಿಜ್ಞಾನ ವಿಭಾಗದ ಶ್ರೀಶ ಕುಮಾರ್, ಕಾರ‍್ಯದರ್ಶಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಪಿ.ಯಶಸ್ವಿ ನಾಯಕ್ ಆಯ್ಕೆಯಾದರು.


ಈ ಪ್ರಕ್ರಿಯೆಯನ್ನು ನರೇಂದ್ರ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿ ಕ್ಷೇಮಪಾಲಕರಾದ ಉಪನ್ಯಾಸಕ ಕಾರ್ತಿಕ್ ಕುಮಾರ್ ಎನ್., ಮಧುರಾ, ರುಚಿತಾಕೃಷ್ಣ, ಸಾಯಿಗೀತ ನಡೆಸಿಕೊಟ್ಟರು.ಎಲ್ಲಾ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಶುಭಹಾರೈಸಿ,ಸರಿಯಾದ ಮಾರ್ಗದರ್ಶನ ಪಡೆದುಕೊಳ್ಳುತ್ತಾ,ಸಂಸ್ಥೆಯ ಏಳಿಗೆಗೆ ಪೂರಕವಾಗಿ ನಡೆದುಕೊಂಡು ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಮುಂದುವರಿಯಬೇಕು ಎಂದು ನುಡಿದರು.

LEAVE A REPLY

Please enter your comment!
Please enter your name here