







ಪುತ್ತೂರು :ಪುತ್ತೂರು ಹೆಚ್‌ಪಿಆರ್ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ವತಿಯಿಂದ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜೂ.17 ರಂದು ಬೆಳಗ್ಗೆ 9.00 ಗಂಟೆಗೆ ಪುತ್ತೂರು ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದೆ.


ಈ ಶಿಬಿರದಲ್ಲಿ ರಕ್ತದೊತ್ತಡ, ರಕ್ತದಲ್ಲಿನ ಸಕ್ಕರೆ ಪ್ರಮಾಣ, ಹಿಮೋಗ್ಲೋಬಿನ್ ಪ್ರಮಾಣ ಹಾಗೂ ರಕ್ತದ ಗುಂಪು ತಪಾಸಣೆ ನಡೆಸಲಾಗುವುದು. ಆರೋಗ್ಯವೇ ಜೀವನದ ಅಮೂಲ್ಯ ಸಂಪತ್ತಾಗಿರುವುದರಿಂದ ಎಲ್ಲಾ ಸಾರ್ವಜಿನಿಕರು ಈ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ತಮ್ಮ ಆರೋಗ್ಯವನ್ನು ಪರೀಕ್ಷಿಸಿಕೊಳ್ಳುವಂತೆ ಹಾಗೂ ಸೌಲಭ್ಯದ ಸದುಪಯೋಗ ಪಡೆಯುವಂತೆ ವಿನಂತಿಸಲಾಗಿದೆ.













