ಸಾಂದೀಪನಿಯಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರ

0

ಪುತ್ತೂರು : ಸಾಂದೀಪನಿ ವಿದ್ಯಾ ಸಂಸ್ಥೆ ಯಶಸ್ವಿ 25 ಸಂವತ್ಸರ ಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಮತ್ತು ಕೌಶಲ್ಯಗಳ ಅಭಿವೃದ್ಧಿಯ ಜತೆಗೆ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಾಗಾರ ‘ ರಜತ ಪಲ್ಲವ ‘ದ ಮೊದಲ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾದ ಜೆಸಿಐ ರಾಷ್ಟ್ರೀಯ ತರಬೇತುದಾರರಾದ ಜೆಸಿ ಸುಹಾಸ್ ಮರಿಕೆ ಇವರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮೊದಲನೆಯ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ ನಡೆಯಿತು. ಈ ತರಬೇತಿಯಲ್ಲಿ ಪ್ರಮುಖವಾಗಿ ಟೀಮ್ ವರ್ಕ್ ನ ಮಹತ್ವ, ನಿರ್ದಿಷ್ಟ ಗುರಿಯ ಅಗತ್ಯ ಮತ್ತು ಅದನ್ನು ಸಾಧಿಸುವ ಬಗ್ಗೆ ವಿವಿಧ ಚಟುವಟಿಕೆಗಳನ್ನು ಒಳಗೊಂಡಿದ್ದವು.

ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಕಾರ್ಯದರ್ಶಿ ಕೃಷ್ಣಪ್ರಸಾದ್ ಕೆದಿಲಾಯ, ಉಪಾಧ್ಯಕ್ಷ ಪ್ರಸನ್ನ ಎನ್ ಭಟ್, ಕೋಶಾಧಿಕಾರಿ ಹರೀಶ್ ಪುತ್ತೂರಾಯ, ಜತೆ ಕಾರ್ಯದರ್ಶಿ ಸುಬ್ರಾಯ ಬಿ ಎಸ್ ಮತ್ತು ಮುಖ್ಯ ಶಿಕ್ಷಕ ಪ್ರಸನ್ನ ಕೆ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 9ನೇ ತರಗತಿಯ 108 ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ತರಬೇತಿ ಕಾರ್ಯಕ್ರಮದ ಸoಯೋಜಕರಾದ ಸಹ ಶಿಕ್ಷಕ ಆನಂದ್ ಆರ್ ಸ್ವಾಗತಿಸಿದರು. ಸಹ ಶಿಕ್ಷಕಿ ಉಷಾ ವಂದಿಸಿದರು.

LEAVE A REPLY

Please enter your comment!
Please enter your name here