ಪೋಕ್ಸೋ:ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗೆ ಜಾಮೀನು ಮಂಜೂರು

0

ಪುತ್ತೂರು:ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಆಲಂಕಾರಿನ ಜಗದೀಶ ಕುಂಬಾರ ಎಂಬಾತನಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ತನ್ನ ಮನೆಯ ಹತ್ತಿರವಿರುವ ಲೋಕೇಶ್ ಎಂಬವರ ಮನೆಗೆ ಹೋಗಿ ಟಿವಿ ನೋಡುತ್ತಿದ್ದ ಸಮಯದಲ್ಲಿ ಆರೋಪಿಯು ಸಂತ್ರಸ್ತೆಯ ಎದೆಯ ಭಾಗವನ್ನು ಮುಟ್ಟಿ ಯಾರಿಗೂ ಹೇಳಬಾರದು ಎಂದು ಬೆದರಿಕೆ ಒಡ್ಡಿದ್ದಾಗಿ ಸಂತ್ರಸ್ತೆ ಆಕೆಯ ತಾಯಿಗೆ ತಿಳಿಸಿದ್ದರು.ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿದ್ದರು.ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗೆ ಇದೀಗ ಪುತ್ತೂರು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸುಮಂಗಲ ಚಕಲಬ್ಬಿರವರು ಜಾಮೀನು ಮಂಜೂರು ಮಾಡಿದ್ದಾರೆ. ಆರೋಪಿ ಪರ ವಕೀಲರಾದ ಮಹೇಶ್ ಕಜೆ ಅವರು ವಾದಿಸಿದ್ದರು.

LEAVE A REPLY

Please enter your comment!
Please enter your name here