






ಪುತ್ತೂರು:ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.


ರಾಜೇಶ್ ಎಂಬವರು ಮೇ 13ರಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಮಯದಲ್ಲಿ ನೀಡಿದ ಹೇಳಿಕೆಯಲ್ಲಿ, ‘ತಾನು ಎರಡನೇ ಆರೋಪಿ ಚೆನ್ನಪ್ಪ ಗೌಡರ ಮನೆಯ ವರಾಂಡದಲ್ಲಿ ಕುಳಿತಿದ್ದ ಸಮಯದಲ್ಲಿ ಆರೋಪಿಗಳಾದ ಅಶೋಕ್ ಮತ್ತು ಚೆನ್ನಪ್ಪ ಗೌಡರು ಅವಾಚ್ಯ ಶಬ್ದಗಳಿಂದ ಬೈದದ್ದು ಮಾತ್ರವಲ್ಲದೆ ಮಾರಕಾಯುಧಗಳಿಂದ ಹಲ್ಲೆ ನಡೆಸಿರುತ್ತಾರೆ ಎಂದು ಆರೋಪಿಸಿದ್ದರು.



ಅವರು ನೀಡಿದ್ದ ದೂರಿನ ಮೇರೆಗೆ ಅಶೋಕ್ ಮತ್ತು ಚೆನ್ನಪ್ಪ ಗೌಡರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯಸಂಹಿತೆಯ ಕಲಂ 352, 109 ಜೊತೆಗೆ 34 ಕಾಯ್ದೆ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಆರೋಪಿಗಳಾದ ಅಶೋಕ್ ಮತ್ತು ಚೆನ್ನಪ್ಪ ಗೌಡರಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರ ವಕೀಲ ಮಹೇಶ್ ಕಜೆ ಅವರು ವಾದಿಸಿದ್ದರು.










