






ಸುಳ್ಯ: ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗಾಗಿ ಆರಂಭಿಸಿದ ಭವಿಷ್ಯ ನಿಧಿ ಯೋಜನೆಗೆ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ಚಾಲನೆ ನೀಡಲಾಯಿತು.


ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫ ಯೋಜನೆಗೆ ಚಾಲನೆ ನೀಡಿ ಮಾತನಾಡಿ, “ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಈ ಭವಿಷ್ಯ ನಿಧಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು. ಚಿಕ್ಕ ಪ್ರಾಯದಿಂದಲೇ ಉಳಿತಾಯ ಮನೋಭಾವನೆ ಬೆಳೆಸಿಕೊಂಡರೆ ವಿದ್ಯಾರ್ಥಿ ದೆಸೆಯಿಂದಲೇ ಆರ್ಥಿಕ ಸಾಕ್ಷರತೆ ಸಾಧ್ಯ. ಇದರಿಂದ ಉಜ್ವಲ ಭವಿಷ್ಯ ರೂಪಿಸಲು ಸಹಕಾರಿಯಾಗುತ್ತದೆ” ಎಂದರು.



ಸಹಕಾರಿ ಸಂಘದ ಅಧ್ಯಕ್ಷ ಮಹಮ್ಮದ್ ಇಕ್ಬಾಲ್ ಎಲಿಮಲೆ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಗ್ರೀನ್ ವ್ಯೂ ಅಧ್ಯಕ್ಷ ಅಬ್ದುಲ್ ಮಜೀದ್ ಜನತಾ, ಪದಾಧಿಕಾರಿಗಳಾದ ಕೆ.ಎಸ್. ಉಮ್ಮರ್, ಶಾಫಿ ಕುತ್ತಾಮೊಟ್ಟೆ, ಎಸ್.ಎಂ. ಹಮೀದ್, ಡಾ. ರಿಜ್ವಾನ್ ಭಾಗವಹಿಸಿದ್ದರು.ಸಂಘದ ನಿರ್ದೇಶಕರಾದ ಜಾರ್ಜ್ ಡಿ’ಸೋಜಾ, ಮುಹಿಯದ್ದೀನ್ ಫ್ಯಾನ್ಸಿ, ಅಮೀನ ಜಯನಗರ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಂಘದ ಕಾರ್ಯ ನಿರ್ವಹಣಾಧಿಕಾರಿ ಪ್ರಜ್ವಲ್ ಸ್ವಾಗತಿಸಿದರು, ಮುಖ್ಯ ಶಿಕ್ಷಕ ಇಲ್ಯಾಸ್ ಕಾಶಿಪಟ್ಣ ವಂದಿಸಿದರು.










