ಹೆಚ್‌ಪಿಆರ್‌ ನರ್ಸಿಂಗ್ ಕಾಲೇಜು ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

0

ಪುತ್ತೂರು: ಹೆಚ್‌ಪಿಆರ್‌ ನರ್ಸಿಂಗ್‌ ಮತ್ತು ಪ್ಯಾರಾಮೆಡಿಕಲ್‌ ಕಾಲೇಜು ವತಿಯಿಂದ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜೂ.17ರಂದು ಪುತ್ತೂರು ಬಸ್‌ ನಿಲ್ದಾಣದ ಮುಂಭಾಗದಲ್ಲಿ ಆಯೋಜಿಸಲಾಯಿತು.


ಶಿಬಿರದ ಉದ್ಘಾಟನೆಯನ್ನು ನಿಲ್ದಾಣದ ಸಂಚಾರ ನಿಯಂತ್ರಕ ಕೆ.ಭಾಸ್ಕರ್ ಶೆಟ್ಟಿ ದೀಪ ಪ್ರಜ್ವಲನೆ ಮೂಲಕ ಉದ್ಘಾಟಸಿ ಶುಭಹಾರೈಸಿದರು.
ಕಾಲೇಜು ಪ್ರಾಂಶುಪಾಲೆ ಆಗ್ನೇಶ್ ಮತ್ತು ಬೋಧಕ ವೃಂದ ಹಾಗೂ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಶಿಬಿರದಲ್ಲಿ ರಕ್ತದೊತ್ತಡ, ರಕ್ತದಲ್ಲಿನ ಸಕ್ಕರೆ ಪ್ರಮಾಣ, ಹಿಮೋಗ್ಲೋಬಿನ್‌ ಪ್ರಮಾಣ ಹಾಗೂ ರಕ್ತದ ಗುಂಪು ತಪಾಸಣೆ ನಡೆಸಲಾಯಿತು. ಆರೋಗ್ಯವೇ ಜೀವನದ ಅಮೂಲ್ಯ ಸಂಪತ್ತಾಗಿರುವುದರಿಂದ ಎಲ್ಲಾ ಸಾರ್ವಜಿನಿಕರು ಈ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ತಮ್ಮ ಆರೋಗ್ಯವನ್ನು ಪರೀಕ್ಷಿಸಿಕೊಳ್ಳುವಂತೆ ಹಾಗೂ ಸೌಲಭ್ಯದ ಸದುಪಯೋಗ ಪಡೆಯುವಂತೆ ಪ್ರಾಂಶುಪಾಲೆ ಆಗ್ನೇಸ್ ರವರು ವಿನಂತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here