ವಿಟ್ಲ: ವಾಹನ ತಪಾಸಣೆ ವೇಳೆ ಪೊಲೀಸ್ – ದ್ವಿಚಕ್ರ ವಾಹನ ಸವಾರನ ಮಧ್ಯೆ ಮಾತಿನ ಚಕಮಕಿ

0

ವಿಟ್ಲ: ಸಂಚಾರ ನಿಯಮ ಉಲ್ಲಂಸಿದ ದ್ವಿಚಕ್ರ ವಾಹನ ಸವಾರನೊಬ್ಬನನ್ನು ಪೊಲೀಸರು ತಡೆದು ನಿಲ್ಲಿಸಿದ ಸಂದರ್ಭದಲ್ಲಿ ಸವಾರ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದ ಘಟನೆ ವಿಟ್ಲ ಪೇಟೆಯಲ್ಲಿ ನಡೆದಿದೆ. ವಿಟ್ಲ ಪೇಟೆಯಲ್ಲಿ ಸಂತೆ ದಿನವಾದ ಜೂ.16ರಂದು ವಾಹನ ದಟ್ಟಣೆಯಿಂದ ಕೂಡಿತ್ತು. ಸುಗಮ ಸಂಚಾರದ ವ್ಯವಸ್ಥೆಗಾಗಿ ಹಾಗೂ ಸಂಚಾರ ನಿಯಮ ಉಲ್ಲಂಸಿದವರ ವಿರುದ್ಧ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ವಿಟ್ಲ ಠಾಣಾಧಿಕಾರಿ ಬಿ.ಎಸ್. ನಾಯ್ಕ್ ಮತ್ತು ಎಎಸ್‌ಐ ಸೋಮನಾಥ್ ರವರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಪುತ್ತೂರು ಕಡೆಯಿಂದ ಬಂದ ಆಕ್ಟಿವಾ ದ್ವಿಚಕ್ರ ವಾಹನ ಸವಾರ ಹೆಲ್ಮೆಟ್ ಧರಿಸದೆ ಮುಖ್ಯರಸ್ತೆಯಿಂದ ಅಡ್ಡದ ಬೀದಿ ಒಳರಸ್ತೆ ಮೂಲಕ ಸಾಗುತ್ತಿದ್ದು ಇದನ್ನು ಗಮನಿಸಿದ ಪೊಲೀಸರು ತಕ್ಷಣ ಆತನನ್ನು ತಡೆದು ವಿಚಾರಣೆ ನಡೆಸಿದ್ದಾರೆ.


ಈ ವೇಳೆ ಸವಾರ ಹಾಗೂ ಪೊಲೀಸ್ ಅಧಿಕಾರಿಗಳ ಮಧ್ಯೆ ತೀವ್ರ ಮಾತಿನ ಚಕಮಕಿ ನಡೆಯಿತು. ಘಟನಾ ಸ್ಥಳದಲ್ಲಿ ಜನ ಜಮಾವಣೆಯಾಗುವುದನ್ನು ಅರಿತ ಅಲ್ಲಿದ್ದ ಅಧಿಕಾರಿಗಳು ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಪ್ರಕಾಶ್ ದೇವಾಡಿಗರವರ ನೇತೃತ್ವದ ಪೊಲೀಸರು ಸ್ಥಳದಲ್ಲಿದ್ದ ಜನರ ಗುಂಪನ್ನು ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಬಳಿಕ ಆಕ್ಟಿವಾ ವಾಹನ ಹಾಗೂ ಸವಾರನನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದಿರುವುದಾಗಿ ಮಾಹಿತಿ ಲಭಿಸಿದೆ.

LEAVE A REPLY

Please enter your comment!
Please enter your name here