ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕದ ಉದ್ಘಾಟನೆ

0

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಕಾಲೇಜು ಘಟಕದ ಉದ್ಘಾಟನೆಯು ಜೂ.16ರಂದು ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆಯಿತು.


ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ ಅವರು ಅಧ್ಯಕ್ಷತೆ ವಹಿಸಿದ್ದರು. ವಿ.ಹಿ.ಪಂ ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ ಅವರು ಅತಿಥಿಯಾಗಿ ಭಾಗವಹಿಸಿ ಮಾತನಾಡಿ
ಅವರು “ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಯುವಜನತೆಯನ್ನು ಸಮಾಜಮುಖಿ ಕಾರ್ಯಗಳಿಗೆ ಪ್ರೆರೇಪಿಸುತ್ತಿದೆ ಮತ್ತು ವಿದ್ಯಾರ್ಥಿಗಳು ಎಬಿವಿಪಿ ಯ ಮುಖೇನ ರಾಷ್ಟ್ರ ಕಾರ್ಯದಲ್ಲಿ ಕೈ ಜೋಡಿಸಬೇಕು” ಎಂದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ನಗರ ಉಪಾಧ್ಯಕ್ಷೆ ಕು.ದೀಪಿಕಾ ಎಸ್ , ಜಿಲ್ಲಾ ಸಂಚಾಲಕರಾದ ಸಮನ್ವಿತ್ ಕೆ ಹಾಗೂ ಚಂದ್ರಶೇಖರ ಮರಾಠಿ, ವಿಭಾಗ ಸಂಘಟನಾ ಕಾರ್ಯದರ್ಶಿಗಳು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗದಿಂದ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here