ಮಾಣಿ: ಸೀರೆಗೆ ಗೊಂಡೆ ಹಾಕುವ ತರಬೇತಿ ಶಿಬಿರದ ಸಮಾರೋಪ

0

ಮಹಿಳೆಯರು ಸ್ವಾವಲಂಬಿಗಳಾದಲ್ಲಿ ಸಮಾಜದ ಅಭಿವೃದ್ಧಿ ಸಾಧ್ಯ: ಬಾಲಕೃಷ್ಣ ಆಳ್ವ ಕೊಡಾಜೆ

ವಿಟ್ಲ: ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ಮಾಡಿದಷ್ಟು ಸಮಾಜ ಅಭಿವೃದ್ಧಿಯಾಗಲು ಸಾಧ್ಯವಿದೆ ಎಂದು ಮಾಣಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.


ಅವರು ದೀನ್ ದಯಾಳ್ ಅಂತ್ಯೋದಯ ಯೋಜನೆ, ಮಾಣಿ ಗ್ರಾಮ ಪಂಚಾಯತ್, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ, ಭಾರತೀಯ ವಿಕಾಸ ಟ್ರಸ್ಟ್, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಮತ್ತು ಮಾಣಿಕ್ಯ ಸಂಜೀವಿನಿ ಒಕ್ಕೂಟದ ಜಂಟಿ ಆಶ್ರಯದಲ್ಲಿ ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಸೀರೆಗೆ ಗೊಂಡೆ ಹಾಕುವ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಹಲವು ವರ್ಷಗಳ ಹಿಂದೆ ಮಹಿಳೆಯರು ಕೇವಲ ಮನೆಗೆ ಸೀಮಿತವಾಗಿದ್ದರು. ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಸ್ವಂತ ದುಡಿಮೆಯಿಂದ ಕುಟುಂಬಕ್ಕೆ ಆಸರೆಯಾಗಿದ್ದಾರೆ. ಮಹಿಳೆಯರು ಇನ್ನಷ್ಟು ಸ್ವ ಉದ್ಯೋಗಗಳಲ್ಲಿ ತೊಡಗಿಕೊಳ್ಳಬೇಕು. ತಮ್ಮ ಜೀವನವನ್ನು ತಾವೇ ರೂಪಿಸುವಂತಾಗಬೇಕು ಎಂದು ಹೇಳಿದರು. ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜ್ಯೋತಿರಾಜ್ ರವರು ಮಾತನಾಡಿ, ಕಲಿಯುವಿಕೆ ಎನ್ನುವುದು ನಿಂತ ನೀರಾಗಬಾರದು, ಮುಂದುವರಿಸಬೇಕು. ಶಿಬಿರದಿಂದ ಪಡೆದ ಅನುಭವ ಮತ್ತಷ್ಟು ಮಂದಿಗೆ ಸಹಕಾರಿಯಾಗಬೇಕು ಎಂದು ಹೇಳಿದರು.
ಭಾರತೀಯ ವಿಕಾಸ ಟ್ರಸ್ಟಿನ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್ ಕೊಲ್ಯ ಮತ್ತು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ತಾಲೂಕು ಸಂಯೋಜಕಿ ಸುಧಾರವರು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು.


ಮಾಣಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ, ಬ್ಯಾಂಕ್ ಆಫ್ ಬರೋಡಾದ ಪ್ರಬಂಧಕ ಅಭಿಲಾಷ್, ತರಬೇತುದಾರರಾದ ಸೌಭಾಗ್ಯ ಮಾತನಾಡಿದರು. ತರಬೇತಿಯಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.


ಮಾಣಿಕ್ಯ ಸಂಜೀವಿನಿ ಒಕ್ಕೂಟದ ಕಾರ್ಯಕರ್ತರಾದ ಲೈಲಾಬಿ, ಸ್ವಾತಿ, ಕೃಷಿ ಸಖಿ ಕವಿತ ಕಾರ್ಯಕ್ರಮ ಸಂಯೋಜಿಸಿದರು. ಶಿಬಿರಾರ್ಥಿಗಳಾದ ಪ್ರಮೀಳ ಸ್ವಾಗತಿಸಿ, ತೀರ್ಥಾವತಿ ಧನ್ಯವಾದ ಸಲ್ಲಿಸಿ, ಸೌಮ್ಯ, ಉಷಾ, ನಿಮಿತಿ, ಚಿತ್ರ ಅನಿಸಿಕೆ ವ್ಯಕ್ತಪಡಿಸಿದರು. ಉಷಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here