ಪೆರ್ನೆ: ಹದಗೆಟ್ಟ ರಸ್ತೆ; ಪ್ರತಿಭಟನೆಯ ಎಚ್ಚರಿಕೆ

0

ಉಪ್ಪಿನಂಗಡಿ: ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಪುರಿಯ ಎಂಬಲ್ಲಿಂದ ಪೆರ್ನೆ ಪೇಟೆಯನ್ನು ಸಂಪರ್ಕಿಸುವ ರಸ್ತೆಯು ಕೆಸರು ಗದ್ದೆಯಾಗಿದ್ದು, ನಡೆದಾಡಲು ಕಷ್ಟಪಡುವ ಸ್ಥಿತಿ ಎದುರಾಗಿದೆ. ಈ ರಸ್ತೆಯನ್ನು ಕಾಂಕ್ರೀಟ್ ಕಾಮಗಾರಿ ನಡೆಸಿ ಸುಸ್ಥಿತಿಗೆ ತಾರದಿದ್ದಲ್ಲಿ ಗ್ರಾಮಸ್ಥರು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.


ಈ ರಸ್ತೆಯು ಸಂಪೂರ್ಣ ಕೆಸರಿನಿಂದ ಕೂಡಿದ್ದು, ವಾಹನ ಸಂಚರಿಸಲು ಸಾಧ್ಯವಾಗದ ಸ್ಥಿತಿಯಿದೆ. ಈ ರಸ್ತೆಯ ಪಕ್ಕದಲ್ಲೇ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಜನರು ರಸ್ತೆ ದಾಟಲು ಭಯ ಪಡುತ್ತಿದ್ದಾರೆ. ಪೆರ್ನೆ ಶಾಲಾ ಕಾಲೇಜಿಗೆ ಬರುವ ಮಕ್ಕಳು ಇದೇ ರಸ್ತೆಯಲ್ಲಿ ಬರಬೇಕಾಗಿದ್ದು, ಮೈ ಕಾಲಲ್ಲೆಲ್ಲಾ ಕೆಸರು ಮೆತ್ತಿಕೊಂಡು ಸಂಚರಿಸಬೇಕಾದ ಸ್ಥಿತಿ ಬಂದೊದಗಿದೆ. ಆದ್ದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಈ ರಸ್ತೆಗೆ ಶೀಘ್ರದಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಸದಿದ್ದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿ ಪೆರ್ನೆ ಗ್ರಾ.ಪಂ.ಗೆ ಮನವಿ ನೀಡಿದ್ದಾರೆ.

LEAVE A REPLY

Please enter your comment!
Please enter your name here