ಕುಂಬ್ರ: ಸಂಸದರಿಂದ ಮುಡಾಲ-ಮಾಯಿಲಕೊಚ್ಚಿ ರಸ್ತೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ- ಹಿರಿಯರಿಗೆ ಗೌರವಾರ್ಪಣೆ, ಮೋದಿ ಆಡಳಿತದ ಯಶಸ್ವಿಗೆ ಸಸಿ ನೆಟ್ಟು ಸಂಭ್ರಮಾಚರಣೆ

0

ಗ್ರಾಮೀಣಾಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು : ಕ್ಯಾ.ಬ್ರಿಜೇಶ್ ಚೌಟ

ಪುತ್ತೂರು: ಲೋಕಸಭಾ ಸದಸ್ಯ ಕ್ಯಾ.ಬ್ರಿಜೇಶ್ ಚೌಟರವರ ಸಂಸದರ ನಿಧಿಯಿಂದ ಒಳಮೊಗ್ರು ಗ್ರಾಮದ ಮುಡಾಲ ಮಾಯಿಲಕೊಚ್ಚಿ ರಸ್ತೆ ಕಾಂಕ್ರಿಟೀಕರಣಕ್ಕೆ ರೂ.5 ಲಕ್ಷ ಅನುದಾನ ಮಂಜೂರು ಮಾಡಿದ್ದು ಇದರ ಶಿಲಾನ್ಯಾಸ ಕಾರ್ಯಕ್ರಮ ಜೂ.18 ರಂದು ನಡೆಯಿತು. ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರ ಉಪಸ್ಥಿತಿಯಲ್ಲಿ 162 ನೇ ಬಿಜೆಪಿ ಬೂತ್ ಅಧ್ಯಕ್ಷ ಶಿವರಾಮ ಗೌಡ ಬೊಳ್ಳಾಡಿಯವರು ತೆಂಗಿನ ಕಾಯಿ ಒಡೆಯುವ ಮೂಲಕ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕ್ಯಾ.ಬ್ರಿಜೇಶ್ ಚೌಟರವರು, ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ವಾರ್ಷಿಕ ರೂ.5 ಕೋಟಿ ಅನುದಾನ ಬರುತ್ತಿದ್ದು ಇದರಲ್ಲಿ 7 ವಿಧಾನಸಭಾ ಕ್ಷೇತ್ರಗಳಿಗೆ ಹಂಚಿಕೆ ಮಾಡಲಾಗುತ್ತಿದೆ. ಇದರಲ್ಲಿ ಈ ಭಾಗದ ಜನರ ಬೇಡಿಕೆಯನ್ನು ಪರಿಗಣಿಸಿ ರೂ.5 ಲಕ್ಷ ಅನುದಾನವನ್ನು ನೀಡಿದ್ದೇನೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನವನ್ನು ನೀಡುವ ಪ್ರಯತ್ನವನ್ನು ಮಾಡುತ್ತೇನೆ ಎಂದು ತಿಳಿಸಿದರು.


ಹಿರಿಯರಿಗೆ ಗೌರವಾರ್ಪಣೆ
ಇದೇ ಸಂದರ್ಭದಲ್ಲಿ ಈ ಭಾಗದ ಹಿರಿಯರನ್ನು ಗೌರವಿಸುವ ಕಾರ್ಯಕ್ರಮ ನಡೆಯಿತು. ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತ ದಿ.ಬಾಳಪ್ಪ ನಾಯ್ಕರ ಪತ್ನಿ ರಾಧಾ ಮುಡಾಲ, ಗ್ರಾಮ ದೈವದ ಚಾಕರಿ ವೃತ್ತಿ ಮಾಡುವ ಬಾಬು ಮುಡಾಲರವರುಗಳನ್ನು ಈ ಸಂದರ್ಭದಲ್ಲಿ ಶಾಲು ಹಾಕಿ ಗೌರವಿಸಲಾಯಿತು.
ಪ್ರಧಾನಿ ನರೇಂದ್ರ ಮೋದಿಯವರು ಯಶಸ್ವಿ 12 ವರ್ಷಗಳ ಆಡಳಿತ ನಡೆಸಿದ ಹಿನ್ನೆಲೆಯಲ್ಲಿ ಮುಡಾಲದಲ್ಲಿ ಹಲಸಿನ ಸಸಿ ನೆಡುವ ಮೂಲಕ ಸಂಭ್ರಮಾಚರಣೆ ಮಾಡುವ ಮೂಲಕ ನರೇಂದ್ರ ಮೋದಿಯವರು ಇನ್ನಷ್ಟು ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ದೇಶವನ್ನು ವಿಶ್ವಗುರುವನ್ನಾಗಿ ಮಾಡುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು.


ಕ್ಯಾ.ಬ್ರಿಜೇಶ್ ಚೌಟರಿಗೆ ಗೌರವಾರ್ಪಣೆ
ಇದೇ ಸಂದರ್ಭದಲ್ಲಿ ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರಿಗೆ ಹಾಗೇ ಮಾಜಿ ಶಾಸಕರಾದ ಸಂಜೀವ ಮಠಂದೂರು ಮತ್ತು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರುರವರುಗಳಿಗೆ ಕಾರ್ಯಕರ್ತರ ವತಿಯಿಂದ ಶಾಲು, ಹಾರ ಹಾಕಿ ಸನ್ಮಾನಿಸಿ, ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಬಿಜಿಪಿ ಗ್ರಾಮಾಂತರ ಮಂಡಲದ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಂಡಲ ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಮಾಜಿ ಮಂಡಲ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್,ಯತೀಂದ್ರ ಕೊಚ್ಚಿ, ರತನ್ ರೈ ಕುಂಬ್ರ, ವಿದ್ಯಾಧರ್ ಜೈನ್, ಬಿಜೆಪಿ ಜಿಲ್ಲಾ ಫಲಾನುಭವಿ ಸಂಪರ್ಕ ಪ್ರಮುಖ್ ನಿತೀಶ್ ಕುಮಾರ್ ಶಾಂತಿವನ, ಬಿಜೆಪಿ ನೆಟ್ಟಣಿಗೆ ಮುಡ್ನೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ, ಜಿಲ್ಲಾ ಪ್ರಮುಖ್ ಚಂದ್ರಶೇಖರ ಬಪ್ಪಳಿಗೆ, ನಗರ ಯುವ ಮೋರ್ಛಾ ಅಧ್ಯಕ್ಷ ನಿತೇಶ್ ಕಲ್ಲೇಗ, ಒಳಮೊಗ್ರು ಗ್ರಾಪಂ ನಿಟಕಪೂರ್ವ ಸದಸ್ಯ ಪ್ರದೀಪ್ ಸೇರ್ತಾಜೆ, ಬಿಎಂಎಸ್ ಕಟ್ಟಡ ಕಾರ್ಮಿಕರ ಸಂಘದ ಕುಂಬ್ರ ವಲಯ ಅಧ್ಯಕ್ಷ ಪುರಂದರ ಶೆಟ್ಟಿ ಮುಡಾಲ, ಕುಂಬ್ರ ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕ ಶ್ರೀನಿವಾಸ ಪ್ರಸಾದ್ ಮುಡಾಲ, ಪ್ರಮುಖರಾದ ಗಿರೀಶ್ ರೈ ಮುರುವ, ರಾಮಕೃಷ್ಣ ಮುಡಾಲ, ಜಯಂತ ಮುಡಾಲ, ಮೇಘರಾಜ್ ಮುಡಾಲ, ಉದ್ಯಮಿ ಪ್ರವೀಣ್ ಪಲ್ಲತ್ತಾರು, ಶಿವಪ್ಪ ನಾಯ್ಕ, ಶೇಷಪ್ಪ ನಾಯ್ಕ, ಶಿವಪ್ಪ ನಾಯ್ಕ, ಸತೀಶ್ ಮುಡಾಲ, ವಿಶ್ವನಾಥ ಕುಲಾಲ್, ಪುರಂದರ ಪಲ್ಲತ್ತಾರು, ಪ್ರೇಮಾ ಮುಡಾಲ, ದೇವಪ್ಪ ನಾಯ್ಕ ಸೇರಿದಂತೆ ಹಲವು ಮಂದಿ ಗ್ರಾಮಸ್ಥರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಬಿಜೆಪಿ ಒಳಮೊಗ್ರು ಶಕ್ತಿ ಕೇಂದ್ರದ ಅಧ್ಯಕ್ಷ ಮಹೇಶ್ ರೈ ಕೇರಿ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.



ಹಂಟ್ಯಾರು-ಬೆಟ್ಟಂಪಾಡಿ ರಸ್ತೆಗೆ ರೂ.3 ಕೋಟಿ ಅನುದಾನ
ಈಗಾಗಲೇ ಸಿಎಸ್‌ಆರ್ ಫಂಡ್‌ನಿಂದ ಈಗಾಗಲೇ ಹಂಟ್ಯಾರು-ಬೆಟ್ಟಂಪಾಡಿ ರಸ್ತೆ ಅಭಿವೃದ್ಧಿಗೆ ರೂ.3 ಕೊಟಿ ಅನುದಾನ ಮಂಜೂರು ಮಾಡಲಾಗಿದೆ ಎಂದು ತಿಳಿಸಿ ಸಂಸದ ಕ್ಯಾ.ಬ್ರಿಜೇಶ್ ಚೌಟರವರು ಗ್ರಾಮಾಂತರ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆಯೊಂದಿಗೆ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಮುಂದಿನ ದಿನಗಳಲ್ಲಿ ನೀಡುತ್ತೇನೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here