ಶ್ರೀ ರಾಮಕುಂಜೇಶ್ವರ ಆ.ಮಾ.ಪ್ರೌಢಶಾಲಾ ಶಿಕ್ಷಕ ರಕ್ಷಕ ಸಂಘ

0

ಅಧ್ಯಕ್ಷ-ಪ್ರಕಾಶ್ ವಳಂಜ, ಉಪಾಧ್ಯಕ್ಷ -ಅಬೂಬಕ್ಕರ್ ಸಿದ್ದೀಕ್, ಜೊತೆ ಕಾರ್ಯದರ್ಶಿ-ಅನಿತಾ ವಿ.ಜೆ., ಲಕ್ಷ್ಮೀನಾರಾಯಣ

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲಾ 2026-27ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಗೌಡ ವಳಂಜ, ಉಪಾಧ್ಯಕ್ಷರಾಗಿ ಅಬೂಬಕ್ಕರ್ ಸಿದ್ದಿಕ್ ಎಚ್, ಜೊತೆ ಕಾರ್ಯದರ್ಶಿಗಳಾಗಿ ಅನಿತಾ ವಿ.ಜಿ., ಲಕ್ಷ್ಮಿ ನಾರಾಯಣ ಅಲೆಪ್ಪಾಡಿ ಆಯ್ಕೆಯಾಗಿದ್ದಾರೆ.


ಜೂ.18ರಂದು ಶಾಲೆಯಲ್ಲಿ ನಡೆದ ಪೋಷಕರ ಸಭೆಯಲ್ಲಿ ಶಿಕ್ಷಕ-ರಕ್ಷಕ ಸಂಘ ಹಾಗೂ ಸುರಕ್ಷಾ ಸಮಿತಿ ಪದಾಧಿಕಾರಿಗಳ ಹಾಗೂ ತರಗತಿವಾರು ಪೋಷಕ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಯಿತು. ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು 2025-26ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳ ಸಾಧನೆ ಹಾಗೂ ಪೋಷಕರಿಗೆ, ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಕ-ರಕ್ಷಕ ಸಂಘದ ನಿಕಟಪೂರ್ವ ಅಧ್ಯಕ್ಷ ಗಿರೀಶ್ ಎ.ಪಿ.ಅವರು ಶಾಲಾ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಶಿಕ್ಷಕ ರಕ್ಷಕ ಸಂಘದ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ನಿವೃತ್ತ ಶಿಕ್ಷಕ ಬಾಲಚಂದ್ರ ಮುಚ್ಚಿಂತಾಯ ಅವರು, ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಶಿಕ್ಷಕರ ಹಾಗೂ ಪೋ?ಕರ ಪಾತ್ರದ ಬಗ್ಗೆ ತಿಳಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ.ಅವರು ಶಾಲಾ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.


2025-26ನೇ ಶೈಕ್ಷಣಿಕ ಸಾಲಿನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ಇಂಡಿಯನ್ ಟ್ಯಾಲೆಂಟ್ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ಸಂಚಾಲಕ ಶಿವಪ್ರಸಾದ್ ಇಜ್ಜಾವು, 2025-26ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ನೀಲಯ್ಯ, ಜೊತೆ ಕಾರ್ಯದರ್ಶಿ ಮಮತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಹಶಿಕ್ಷಕ ರಾಧಾಕೃಷ್ಣ ಬಿ., ಶಿಕ್ಷಕ ರಕ್ಷಕ ಸಂಘ ಹಾಗೂ ಸುರಕ್ಷಾ ಸಮಿತಿ ರಚನೆಯ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್.ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಲೋಹಿತಾ ವಂದಿಸಿದರು. ಸಹ ಶಿಕ್ಷಕ ಹರೀಶ ಆಚಾರ್ಯ ಎಂ.ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಥೆಯ ವ್ಯವಸ್ಥಾಪಕ ರಮೇಶ್ ರೈ, ಶಿಕ್ಷಕ-ಶಿಕ್ಷಕೇತರರು, ನಿಲಯ ಪಾಲಕರು ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here