ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಮೊದಲ ಪೋಷಕರ ಸಭೆಯು ಜೂ.19ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ತಮ್ಮ ಪರಿಚಯವನ್ನು ನೀಡಿದರು. ಬಳಿಕ ಆಂಗ್ಲ ಭಾಷಾ ಶಿಕ್ಷಕರಾದ ಪ್ರವೀಣ್ ಕುಮಾರ್ ಅವರು ಪೋಷಕರ ಜವಾಬ್ದಾರಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರದ ಕುರಿತು ಮಾಹಿತಿ ನೀಡಿದರು. ಸಮಾಜ ವಿಜ್ಞಾನ ಶಿಕ್ಷಕರಾದ ದಿನೇಶ್ ಅವರು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿವಿಧ ಸೌಲಭ್ಯಗಳ ಬಗ್ಗೆ ವಿವರಿಸಿದರು. ವಿಜ್ಞಾನ ಶಿಕ್ಷಕಿ ಉಷಾ ಅವರು ವಿದ್ಯಾರ್ಥಿಗಳು ಶಾಲೆಯಲ್ಲಿ ಹಾಗೂ ಮನೆಯಲ್ಲಿ ಅನುಸರಿಸಬೇಕಾದ ಶಿಸ್ತು, ನಡವಳಿಕೆ ಮತ್ತು ಉತ್ತಮ ವ್ಯಕ್ತಿತ್ವದ ಕುರಿತು ತಿಳಿಸಿದರು. ಗಣಿತ ಶಿಕ್ಷಕರಾದ ವೆಂಕಟೇಶ್ ದಾಮ್ಲೆ ಅವರು ವಿದ್ಯಾರ್ಥಿಗಳ ಆಹಾರ ಪದ್ಧತಿ, ಆರೋಗ್ಯಕರ ಜೀವನಶೈಲಿ ಮತ್ತು ದಿನಚರಿಯ ಮಹತ್ವದ ಕುರಿತು ಮಾಹಿತಿ ನೀಡಿದರು.


ಶಾಲಾ ಮುಖ್ಯ ಶಿಕ್ಷಕರಾದ ಸತೀಶ್ ಭಟ್ ಅವರು ಶಾಲೆಯ ಶೈಕ್ಷಣಿಕ ಚಟುವಟಿಕೆಗಳು, ನಿಯಮಗಳು ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಮಾಹಿತಿಗಳನ್ನು ಪೋಷಕರಿಗೆ ತಿಳಿಸಿದರು. ಶಿಕ್ಷಕಿ ನಿಶ್ಚಿತ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here