ಈಶ್ವರಮಂಗಲ: ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

0

ಈಶ್ವರಮಂಗಲ: ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಶಾಲೆಯ ಮೈದಾನದಲ್ಲಿ ನೂರಾರು ವಿದ್ಯಾರ್ಥಿಗಳು ಒಟ್ಟಾಗಿ ಸೇರಿ ಧ್ಯಾನ, ಪ್ರಾಣಾಯಾಮ, ಸೂರ್ಯ ನಮಸ್ಕಾರ ಹಾಗೂ ವೃಕ್ಷಾಸನ ಸೇರಿದಂತೆ ವಿವಿಧ ಯೋಗಾಸನಗಳನ್ನು ಅಭ್ಯಾಸ ಮಾಡಿದರು. ವಿದ್ಯಾರ್ಥಿಗಳ ಸಾಮೂಹಿಕ ಯೋಗಾಭ್ಯಾಸ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು.ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಚಿನ್ಮಯ ಪನೆಯಾಲ ಹಾಗೂ ಸಹ ಶಿಕ್ಷಕ-ಶಿಕ್ಷಕಿಯರು ಉಪಸ್ಥಿತರಿದ್ದರು. ಯೋಗಾಭ್ಯಾಸದ ಮೂಲಕ ವಿದ್ಯಾರ್ಥಿಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮಹತ್ವವನ್ನು ಅರಿತುಕೊಂಡರು.

LEAVE A REPLY

Please enter your comment!
Please enter your name here