






ಹಿರೇಬಂಡಾಡಿ: ಇಲ್ಲಿನ ಸರಕಾರಿ ಪ್ರೌಢಶಾಲೆಯಲ್ಲಿ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶಾಲಾ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.



ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಮೋನಪ್ಪ ಪೂಜಾರಿ ಅವರು ಉದ್ಘಾಟಿಸಿ, ಸಾಧನೆಗೈದ ವಿದ್ಯಾರ್ಥಿಗಳನ್ನು ಶಾಲು ಹೊದಿಸಿ, ಸ್ಮರಣಿಕೆ ಮತ್ತು ನಗದು ಬಹುಮಾನ ನೀಡಿ ಸನ್ಮಾನಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಪರಿಶ್ರಮದಿಂದ ತಮ್ಮ ವ್ಯಾಸಂಗವನ್ನು ಮುಂದುವರಿಸಿ ಜೀವನದಲ್ಲಿ ಉತ್ತಮ ಸಾಧನೆ ಮಾಡುವಂತೆ ಹೇಳಿದರು. ಹಿರೇಬಂಡಾಡಿ ಸರಕಾರಿ ಪ್ರೌಢಶಾಲೆ ಸತತ ೬ನೇ ಬಾರಿ ಶೇ.100 ಫಲಿತಾಂಶ ಪಡೆಯುವ ಮೂಲಕ ಅಮೋಘ ಸಾಧನೆ ಮಾಡಿದೆ. ಶಾಲೆಯ ಅತ್ಯುತ್ತಮ ಫಲಿತಾಂಶದ ಹಿಂದೆ ಶಿಕ್ಷಕ ವೃಂದ, ಪೋಷಕರು ಮತ್ತು ಎಸ್‌ಡಿಎಂಸಿಯ ಪಾತ್ರ ಹಿರಿದಾಗಿದೆ ಎಂದು ಶ್ಲಾಘಿಸಿದರು.



ಅತಿಥಿಯಾಗಿದ್ದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಸೀತಾರಾಮ ಗೌಡ ಬಂಡಾಡಿ ಮಾತನಾಡಿ, ಈ ಪ್ರೌಢಶಾಲೆಯಲ್ಲಿ ಕಲಿಕೆಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕಯಗಳಿದ್ದು ವಿದ್ಯಾರ್ಥಿಗಳು ಹೆಚ್ಚಿನ ಸಾಧನೆಯನ್ನು ಮಾಡಿ ಶಾಲೆಯ ಹಾಗೂ ಊರಿನ ಘನತೆಯನ್ನು ಹೆಚ್ಚಿಸುವಂತೆ ಹೇಳಿದರು. ಶಿಕ್ಷಕರೊಂದಿಗೆ ಪೋಷಕರು ಕೈಜೋಡಿಸಿದರೆ ವಿದ್ಯಾರ್ಥಿಗಳು ಸರ್ವತೋಮುಖ ಬೆಳವಣಿಗೆಯೊಂದಿಗೆ ಅದ್ಬುತ ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು. ಶಾಲಾಭಿವೃದಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ರವೀಂದ್ರ ಪಟಾರ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲೆಯ ಉತ್ತಮ ಸಾಧನೆಯ ಹಿಂದೆ ಪೋಷಕರ ಪಾತ್ರ ತುಂಬಾ ಹೆಚ್ಚಿನದ್ದು. ಪೋಷಕರು ಶಾಲೆಯ ಕೆಲಸ ಕಾಯಗಳಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದಲ್ಲಿ ಈ ಪ್ರೌಢಶಾಲೆಯು ಇನ್ನಷು ಪ್ರಗತಿ ಕಾಣಲು ಸಾಧ್ಯ ಎಂದು ಹೇಳಿದರು.

ದೈಹಿಕ ಶಿಕ್ಷಣ ಶಿಕ್ಷಕರಾದ ಚಕ್ರಪಾಣಿ ವೇದಿಕೆಯಲ್ಲಿ ಉಪಸಿತರಿದ್ದರು. ಕನ್ನಡ ಭಾಷಾ ಶಿಕ್ಷಕಿ ಮಲ್ಲಿಕಾ ಐ. ಕಾಯಕ್ರಮದ ಔಚಿತ್ಯದ ಬಗ್ಗೆ ಮಾಹಿತಿ ನೀಡಿದರು. ವಿಜ್ಞಾನ ಶಿಕ್ಷಕರಾದ ಮನೋಹರ ಎಂ. ಕಳೆದ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಸಾಧನೆಗಳ ಬಗೆ ಕಿರು ಚಿತ್ರಣ ನೀಡಿದರು. ಶಾಲಾ ಮುಖ್ಯಗುರು ಗಣಪತಿ ಭಟ್ ಸ್ವಾಗತಿಸಿದರು. ಉಷಾಕಿರಣ ರೈ ಡಿ.ವಂದಿಸಿದರು. ಆಂಗ್ಲ ಭಾಷಾ ಶಿಕ್ಷಕರಾದ ವಸಂತ ಕುಮಾರ್ ಪಿ ನಿರೂಪಿಸಿದರು. ಹಿಂದಿ ಭಾಷಾ ಶಿಕ್ಷಕಿ ಆರತಿ ಮತ್ತು ಸುಧಾ ಸಹಕರಿಸಿದರು.
ವಿವಿಧ ಸಂಘಗಳ ಉದ್ಘಾಟನೆ;
ಕಾಯಕ್ರಮದಲ್ಲಿ 2026-27ನೇ ಸಾಲಿನ ಶಾಲಾ ಸಂಸತ್ತಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧನೆ ಮಾಡಲಾಯಿತು. ಶಾಲಾ ಮುಖ್ಯ ಶಿಕ್ಷಕರಾದ ಗಣಪತಿ ಭಟ್ ಪ್ರಮಾಣ ವಚನ ಬೋಧಿಸಿದರು. ಶಾಲೆಯಲ್ಲಿ ಕಾರ್ಯಾಚರಿಸುವ ವಿವಿಧ ಸಂಘಗಳ ಉದ್ಘಾಟನೆಯನ್ನು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಸೀತಾರಾಮ ಗೌಡ ಉದ್ಘಾಟಿಸಿದರು. ಸಂಘಗಳ ಮಾಹಿತಿಯನ್ನು ಸಮಾಜ ವಿಜ್ಞಾನ ಶಿಕ್ಷಕಿ ಲಲಿತ ಕೆ. ನೀಡಿದರು.










