






ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಹೂಗುಚ್ಛ (ಫ್ಲವರ್ ಬೊಕ್ಕೆ) ತಯಾರಿಕಾ ತರಬೇತಿ ಕಾರ್ಯಕ್ರಮ ಜೂ.20ರಂದು ಜರುಗಿತು.



ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಾದ ಪ್ರೇಮಾವತಿ ಹಾಗೂ ಹರಿಣಾಕ್ಷಿ ಅವರು ವಿದ್ಯಾರ್ಥಿಗಳಿಗೆ ಹೂಗುಚ್ಛ ತಯಾರಿಕೆಯ ಕುರಿತು ಪ್ರಾಯೋಗಿಕ ತರಬೇತಿ ನೀಡಿದರು. ವಿದ್ಯಾರ್ಥಿಗಳು ಆಸಕ್ತಿಯಿಂದ ತರಬೇತಿಯಲ್ಲಿ ಭಾಗವಹಿಸಿ ಹೂಗುಚ್ಛ ತಯಾರಿಸುವ ಕೌಶಲ್ಯವನ್ನು ಕಲಿತುಕೊಂಡರು. ಗಣಿತ ಶಿಕ್ಷಕರಾದ ವೆಂಕಟೇಶ ದಾಮ್ಲೆ ಹಾಗೂ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ಅವರು ತರಬೇತುದಾರರನ್ನು ಸ್ಮರಣಿಕೆ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಿಕ್ಷಕಿ ನಿಶ್ಚಿತ ಸ್ವಾಗತಿಸಿದರು.













