ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ವಿಶ್ವ ಯೋಗ ದಿನಾಚರಣೆ

0

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಯೋಗಾಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ದೀಪ ಪ್ರಜ್ವಲಿಸಿ ಪ್ರಾರಂಭಗೊಂಡ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ರವಿ ಮುಂಗ್ಲಿಮನೆ ವಹಿಸಿ ಮಾತನಾಡಿದ ಅವರು, “ಯೋಗವು ಭಾರತದ ಋಷಿ ಪರಂಪರೆ ವಿಶ್ವಕ್ಕೆ ಕೊಟ್ಟ ಕೊಡುಗೆ. ಯೋಗ ಮನಸ್ಸು, ದೇಹ, ಆತ್ಮವನ್ನು ಕೇಂದ್ರೀಕರಿಸುವ ವಿಜ್ಞಾನ. ಯೋಗದಿಂದ ರೋಗವಿಲ್ಲ. ಪ್ರತಿದಿನ ಯೋಗಾಭ್ಯಾಸ ಮಾಡುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು” ಎಂದು ಕರೆ ನೀಡಿದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯೆ ಜಯಂತಿ ನಾಯಕ್ ಅವರು ಯೋಗದ ಮಹತ್ವ, ಆರೋಗ್ಯಕರ ಜೀವನಶೈಲಿ ಹಾಗೂ ಮಾನಸಿಕ ನೆಮ್ಮದಿಗೆ ಯೋಗದ ಅಗತ್ಯತೆಯ ಬಗ್ಗೆ ಮಾಹಿತಿ ನೀಡಿದರು.ವಿದ್ಯಾಭಾರತಿ ಜಿಲ್ಲಾ ಯೋಗ ಶಿಕ್ಷಣ ಸಂಯೋಜಕ ಚಂದ್ರಶೇಖರ ಅವರು ಯೋಗಾಭ್ಯಾಸದ ಪ್ರಾತ್ಯಕ್ಷಿಕೆ ಹಾಗೂ ಮಾರ್ಗದರ್ಶನ ನೀಡಿದರು.ವಿಜ್ಞಾನ ವಿಭಾಗದ ಉಪನ್ಯಾಸಕಿ ಸಹನಾ ಅತಿಥಿಗಳನ್ನು ಸ್ವಾಗತಿಸಿದರು.

ಆಟೋಮೊಬೈಲ್ ವಿಭಾಗದ ಉಪನ್ಯಾಸಕ ಪ್ರದೀಪ್ ಧನ್ಯವಾದ ಸಮರ್ಪಿಸಿದರು.ಈ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಉಪನ್ಯಾಸಕೇತರ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here