






ಪುತ್ತೂರು: ಜೇಸಿಐ ಆಲಂಕಾರು ಘಟಕದ ವತಿಯಿಂದ ಜೂನ್ ತಿಂಗಳ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಕಾರ್ಯಕ್ರಮ ಆಲಂಕಾರಿನ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಆಲಂಕಾರು ಘಟಕದ ಅಧ್ಯಕ್ಷ ಜೇಸಿ ಮಹೇಶ್ ಪಾಟಾಳಿ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಘಟಕದ ಪೂರ್ವಾಧ್ಯಕ್ಷ ಜೇಸಿ ಗುರುಪ್ರಸಾದ್ ರೈ ಕೇವಳ,ನಿಕಟಪೂರ್ವಾಧ್ಯಕ್ಷ ಜೇಸಿ ಗುರುರಾಜ್ ರೈ ಭಾಗವಹಿಸಿದ್ದರು.



ಕಾರ್ಯಕ್ರಮದಲ್ಲಿ ಹಲವಾರು ಪ್ರತಿಷ್ಠಿತ ನರ್ಸಿಂಗ್ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ,ಪ್ರಸ್ತುತ ಕಳೆದ ಎಂಟು ವರ್ಷಗಳಿಂದ ಪುತ್ತೂರಿನ ಸಿಟಿ ಆಸ್ಪತ್ರೆಯಲ್ಲಿ ನರ್ಸಿಂಗ್ ಸೂಪರಿಂಟೆಂಡೆಂಟ್ ಆಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಅಮಿತಾ ಪಿ ಇವರಿಗೆ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪುರಸ್ಕಾರ ಪ್ರದಾನ ಮಾಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಘಟಕದ ಕಾರ್ಯದರ್ಶಿ ಜೇಸಿ ಜನಾರ್ದನ್ ಸುರ್ಯ,ಜೆಜೇಸಿ ಅಧ್ಯಕ್ಷೆ ಕೀರ್ತಿ ಶೆಟ್ಟಿ,ಜೇಸಿಐ ಆಲಂಕಾರು ಘಟಕದ ಪೂರ್ವಾಧ್ಯಕ್ಷರುಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.ಅಧ್ಯಕ್ಷ ಮಹೇಶ್ ಪಾಟಾಳಿ ಸ್ವಾಗತಿಸಿ,ಪೂರ್ವಾಧ್ಯಕ್ಷ ಜೇಸಿ ಗುರುಕಿರಣ್ ಶೆಟ್ಟಿ ವಂದಿಸಿದರು.ಜೇಸಿ ಶ್ರುತಿ ರೈ ಸನ್ಮಾನಿತರ ಪರಿಚಯ ಮಾಡಿದರು.












