ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದಲ್ಲಿ ಪೋಷಕರ ಸಭೆ,ಎಸ್‌ಎಸ್‌ಎಲ್‌ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

0

ಪುತ್ತೂರು : ಸರಸ್ವತಿ ವಿದ್ಯಾ ಮಂದಿರ ಪುರುಷರಕಟ್ಟೆ ಇಲ್ಲಿನ 2026-27ನೇ ಸಾಲಿನ ಪೋಷಕರ ಮಹಾಸಭೆ ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮಗಳು ಜೂ.21ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.


ಶಾಲಾ ಸಂಚಾಲಕರಾದ ಅವಿನಾಶ್ ಕೊಡಂಕಿರಿ ಇವರು ಪೋಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಂಸ್ಥೆಯ ಏಳಿಗೆಗೆ ಸಹಕರಿಸಿದ ಪೋಷಕರಿಗೆ ಕೃತಜ್ಞತೆ ಸಲ್ಲಿಸಿದರು. ಶಾಲಾ ಸುರಕ್ಷತಾ ಸಮಿತಿಯ ಅಧ್ಯಕ್ಷರಾದ ಸಚಿನ್ ಕಂಪ, ಶಾಲಾ ಆಡಳಿತಾಧಿಕಾರಿ ಶ್ರೀಮತಿ ಶುಭಾ ಅವಿನಾಶ್, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ಸುರೇಶ್ ಭಟ್ ಸೂರ್ಡೇಲು ಮತ್ತು ವಿಶ್ವನಾಥ ಬಲ್ಯಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು.
ಸಹಾಯಕ ಮುಖ್ಯಗುರು ದಿವ್ಯ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಧಾಕೃಷ್ಣ ಎಂ ಶಾಲಾ ನೀತಿ ನಿಯಮಗಳನ್ನು ತಿಳಿಸಿದರು. ಶಿಕ್ಷಕಿಯರಾದ ಶ್ರೀಲಕ್ಷ್ಮೀ ಮೊಳೆಯಾರ್ ಮತ್ತು ಸ್ಮಿತಾ ಸಾಧಕ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿಯರಾದ ಪವಿತ್ರಾ, ಹರ್ಷಿಣಿ, ಅಂಜಲಿ ಪ್ರಾರ್ಥಿಸಿದರು. ಶಿಕ್ಷಕಿ ಹರ್ಷಿಣಿ ವಂದಿಸಿ, ಶೈಲಜಾ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here