ಉಪ್ಪಳಿಗೆ ಸರಕಾರಿ ಪ್ರೌಢಶಾಲೆಯಲ್ಲಿ ಯುವ ಸಂಸತ್ ಉದ್ಘಾಟನೆ

0

ಪುತ್ತೂರು: ಇರ್ದೆ ಉಪ್ಪಳಿಗೆ ಸರಕಾರಿ ಪ್ರೌಢಶಾಲೆಯಲ್ಲಿ 2026-27ನೇ ಸಾಲಿನ ವಿದ್ಯಾರ್ಥಿಗಳ ಯುವ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನೆಯಿ ಜೂ.20ರಂದು ಶಾಲಾ ಸಭಾಂಗಣದಲ್ಲಿ ನೆರವೇರಿತು.


ವಿದ್ಯಾರ್ಥಿಗಳ ಯುವ ಸಂಸತ್‌ನ್ನು ಉದ್ಘಾಟಿಸಿದ ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ ಶಿವಾನಂದ ಮಾತನಾಡಿ, ಭಾರತದ ಸಂವಿಧಾನದ ಮಹತ್ವವನ್ನು ವಿವರಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಹಾಗೂ ಮಹತ್ವವನ್ನು ತಿಳಿಸಿದ ಅವರು ಪ್ರಜಾಪ್ರಭುತ್ವದ ಆಶಯಗಳನ್ನು ಉಳಿಸಿ ಬಲೀಷ್ಠಗೊಳಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದುದು ಎಂದು ಹೇಳಿದರು.


ಶಾಲಾ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಹಾಗೂ ಇರ್ದೆ ಉಪ್ಪಳಿಗೆ ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಸುಜಾತ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಅನ್ನಮ್ಮ ಅವರ ನಿರ್ದೇಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಕರಾದ ರಾಮಚಂದ್ರ ಕೆ. ಸ್ವಾಗತಿಸಿದರು. ಶಾಮಲಾ ಎಂ., ರಾಮಕೃಷ್ಣ ಕಾರ್ಯಕ್ರಮ ನಿರೂಪಿಸಿದರು. ಸವಿತಾ ಕೆ. ವಂದಿಸಿದರು. ಅಶ್ವಿನಿ, ವಿದ್ಯಾಲಕ್ಷ್ಮಿ ಹಾಗೂ ಪ್ರಿಯ ಸಹಕರಿಸಿದರು. ಎಸ್‌ಡಿಎಂಸಿ ಸದಸ್ಯರು ಹಾಗೂ ಪೋಷಕರು ಸಭೆಯಲ್ಲಿ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here