







ಆನಡ್ಕ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಡ್ಕದಲ್ಲಿ 12ನೇ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲ ವಸಂತ ಮೂಲ್ಯ ದೀಪ ಬೆಳಗಿಸಿ ಉದ್ಘಾಟಿಸಿದರು.ಬಳಿಕ ವಿದ್ಯಾರ್ಥಿಗಳು, ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ಪೋಷಕರು ಯೋಗಾಸನ ಕಾರ್ಯಕ್ರಮ ನೆರವೇರಿಸಿದರು.ಸಭಾ ಕಾರ್ಯಕ್ರಮದಲ್ಲಿ ಶಾಲಾ ದಾನಿಗಳಾದ ಗಣೇಶ್ ಪಂಜಿಗ, ಸುರೇಶ್ ಕುಮಾರ್, ಗುರುಪ್ರಸಾದ್ ಅವರು ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಸಮವಸ್ತ್ರವನ್ನು ವಿತರಿಸಿದರು. ಶಾಲಾ ದಾನಿ ತೇಜೇಂದ್ರ ಅವರು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳು ಹಾಗೂ ಕಲಿಕಾ ಕಿಟ್‌ಗಳನ್ನು ಹಸ್ತಾಂತರಿಸಿದರು.



ವೇದಿಕೆಯಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಹರೀಶ್, ಸದಸ್ಯರಾದ ನಾರಾಯಣ ಸುವರ್ಣ, ದಿನೇಶ್ ಗೌಡ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಕುಮಾರ್, ಮುಖ್ಯ ಶಿಕ್ಷಕಿ ಹರಿಣಾಕ್ಷಿ, ಉಪಾಧ್ಯಕ್ಷೆ ಸುಜಾತ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು, ಅಕ್ಷರ ದಾಸೋಹ ಸಿಬ್ಬಂದಿ ಪಾಲ್ಗೊಂಡಿದ್ದರು. ಮುಖ್ಯ ಶಿಕ್ಷಕಿ ಹರಿಣಾಕ್ಷಿ ಸ್ವಾಗತಿಸಿ, ಶಿಕ್ಷಕಿ ವಿಶಾಲಾಕ್ಷಿ ವಂದಿಸಿದರು. ಶಿಕ್ಷಕಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು. ಸುನಿಲ್, ನೀತಾ ಹಾಗೂ ಪೂರ್ಣಿಮಾ ಸಹಕರಿಸಿದರು.












