







ರಾಮಕುಂಜ: ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ಪೋಷಕರ ಸಭೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಡೆಯಲಿರುವ ತರಬೇತಿ ತರಗತಿಗಳ ಕುರಿತಾದ ಮಾಹಿತಿ ಕಾರ್ಯಕ್ರಮ ನಡೆಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪುತ್ತೂರಿನ ನಿವೃತ್ತ ಪ್ರಾಂಶುಪಾಲರಾದ ಬಿ.ವಿ.ಸೂರ್ಯನಾರಾಯಣ ಅವರು, ಸ್ಪರ್ಧಾತ್ಮಕ ಪರೀಕ್ಷೆಗಳಾದ ಸಿಇಟಿ, ನೀಟ್, ಜೆಇಇಗಳಲ್ಲಿ ಯಶಸ್ಸನ್ನ ಸಾಧಿಸಲು ನಿರಂತರವಾದ ಕಲಿಕೆ, ತರಬೇತಿ ಅತ್ಯಗತ್ಯ. ವಿದ್ಯಾರ್ಥಿಗಳು ಪ್ರತಿನಿತ್ಯ ಶ್ರದ್ದೆಯಿಂದ ಅಧ್ಯಯನ ಮಾಡಿದಲ್ಲಿ ಮಾತ್ರ ಉನ್ನತ ಸ್ಥಾನಕ್ಕೆ ಏರಲು ಸಾಧ್ಯ. ಪಿಯುಸಿ ಆದ ಬಳಿಕ ವಿಪುಲ ಅವಕಾಶಗಳು ಖಂಡಿತವಾಗಿಯೂ ಇದೆ. ಅವನೆಲ್ಲ ಸರಿಯಾಗಿ ಗುರುತಿಸಿಕೊಂಡು, ವ್ಯವಸ್ಥಿತವಾಗಿ ಅಧ್ಯಯನ ಮಾಡಿದಾಗ ಸಾಧನೆಯ ಶಿಖರವನ್ನು ವಿದ್ಯಾರ್ಥಿಗಳು ಏರಬಹುದು ಎಂದು ಹೇಳಿದರು.



ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್.ಮಾತನಾಡಿ, ನಮ್ಮ ಕಾಲೇಜಿನಲ್ಲಿ ದೀರ್ಘ ಅವಧಿಯ ನೀಟ್, ಸಿಇಟಿ, ಜೆಇಇ ಕೋಚಿಂಗ್ ತರಗತಿಗಳು ನಿರಂತರವಾಗಿ ನಡೆಯುತ್ತದೆ. ಪ್ರತಿ ವಿಷಯದಲ್ಲಿಯೂ ನುರಿತ ಮತ್ತು ಪ್ರಸಿದ್ಧ ಉಪನ್ಯಾಸಕರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ತಯಾರು ಮಾಡುತ್ತಾರೆ. ವಿದ್ಯಾರ್ಥಿಗಳಾದ ತಾವೆಲ್ಲರೂ ಈ ಸೌಲಭ್ಯವನ್ನು ಬಳಸಿಕೊಂಡು ಯಶಸ್ಸನ್ನು ಕಾಣುವಂತಾಗಲಿ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ಕೆ, ಮತ್ತು ಉಪನ್ಯಾಸಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭೌತಶಾಸ್ತ್ರ ಉಪನ್ಯಾಸಕ ಸುಬ್ರಹ್ಮಣ್ಯ ಕಾರಂತ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರಸಾಯನ ಶಾಸ್ತ್ರ ಉಪನ್ಯಾಸಕಿ ಅಕ್ಷತಾ ವಂದಿಸಿದರು.










