ಒಳಮೊಗ್ರು ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ : ಪ್ರತಿಭಾ ಪುರಸ್ಕಾರ, ಉಚಿತ ಪುಸ್ತಕ ವಿತರಣೆ

0

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಆಶ್ರಯದಲ್ಲಿ, ಒಳಮೊಗ್ರು ಬಿಲ್ಲವ ಗ್ರಾಮ ಸಮಿತಿ ಹಾಗೂ ಮಹಿಳಾ ವೇದಿಕೆಯ ವತಿಯಿಂದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಮತ್ತು ಉಚಿತ ಪುಸ್ತಕ ವಿತರಣಾ ಸಮಾರಂಭವು ಕುಂಬ್ರ ನವೋದಯ ರೈತ ಸಭಾಭವನದಲ್ಲಿ ಜೂ.21ರಂದು ನಡೆಯಿತು.

ಗ್ರಾಮ ಸಮಿತಿ ಅಧ್ಯಕ್ಷ ಸುಶಾಂತ್ ಅಜ್ಜಿಕಲ್ಲು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಬಿಲ್ಲವ ಸಂಘದ ಪ್ರಥಮ ಉಪಾಧ್ಯಕ್ಷ ಚಿದಾನಂದ ಸುವರ್ಣ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ಸಂಘಟನೆಯ ಕಾರ್ಯಚಟುವಟಿಕೆಗಳಿಗೆ ಶುಭ ಹಾರೈಸಿದರು.


ವೇದಿಕೆಯಲ್ಲಿ ಬಿಲ್ಲವ ಸಂಘ ಪುತ್ತೂರು ಇದರ ದ್ವಿತೀಯ ಉಪಾಧ್ಯಕ್ಷೆ ಪುಷ್ಪಾವತಿ ಕೇಕುಡೆ, ಕೋಶಾಧಿಕಾರಿ ಜನಾರ್ದನ ಪೂಜಾರಿ ಪದಡ್ಕ, ವಲಯ ಸಂಚಾಲಕ ಬಾಬು ಪೂಜಾರಿ ಇದ್ಪಾಡಿ, ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಶಮಿತ್ ಪರ್ಪುಂಜ ಹಾಗೂ ಮಹಿಳಾ ವೇದಿಕೆ ಒಳಮೊಗ್ರು ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಉಪಸ್ಥಿತರಿದ್ದು, ಸಂದರ್ಭೋಚಿತವಾಗಿ ಮಾತನಾಡಿದರು. ಸ್ಮೃತಿ ಪಲ್ಲತ್ತಾರು ಪ್ರಾರ್ಥಿಸಿದರು. ಒಳಮೊಗ್ರು ಮಹಿಳಾ ವೇದಿಕೆ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಸ್ವಾಗತಿಸಿದರು. ಗ್ರಾಮ ಸಮಿತಿ ಕಾರ್ಯದರ್ಶಿ ಸುಷ್ಮಾ ಸತೀಶ್ ವಾರ್ಷಿಕ ವರದಿ ವಾಚಿಸಿದರು. ಗೀತಾ ದರ್ಬೆತಡ್ಕ ವಂದಿಸಿದರು. ಚೇತನಾ ಅಜ್ಜಿಕಲ್ಲು ಮತ್ತು ಪ್ರಮೀತಾ ಬಡೆಕೋಡಿ ಕಾರ್ಯಕ್ರಮ ನಿರೂಪಿಸಿದರು.


ಗೌರವಾರ್ಪಣೆ ಮತ್ತು ಸಾಧಕರ ಸನ್ಮಾನ
ಕಾರ್ಯಕ್ರಮದಲ್ಲಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸೃಷ್ಟಿ ಎಸ್.ಪಿ. ಮುಡಾಲ, ಜಾಹ್ನವಿ ಎಂ. ಮುಡಾಲ, ಪೃಥ್ವಿ ವಿ. ದರ್ಬೆತಡ್ಕ ಹಾಗೂ ಅಶ್ವಿತಾ ಕೋಡಿಬೈಲು ಅವರನ್ನು ಸನ್ಮಾನಿಸಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಸ್ಮೃತಿ ಪಲ್ಲತ್ತಾರು (ರಾಜ್ಯ ಮಟ್ಟದ ಕರಾಟೆ) ಮತ್ತು ಸನ್ನಿದಿ ನಾನಿಲ್ತಡ್ಕ (ರಾಷ್ಟ್ರ ಮಟ್ಟದ ಕಬಡ್ಡಿ) ಅವರನ್ನು ಗೌರವಿಸಲಾಯಿತು. ಅಲ್ಲದೆ, ಪುತ್ತೂರು ಯುವವಾಹಿನಿ ಘಟಕದ ಅಧ್ಯಕ್ಷ ಶಮಿತ್ ಪರ್ಪುಂಜ ಮತ್ತು ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಭ್ರಷ್ಟಾಚಾರ ರಹಿತ ಜನಪರ ಸೇವೆ ಸಲ್ಲಿಸಿದ ತ್ರಿವೇಣಿ ಪಲ್ಲತ್ತಾರು ಅವರನ್ನು ಸಮಿತಿಯ ವತಿಯಿಂದ ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ೪೫ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ವಿತರಿಸಲಾಯಿತು.

LEAVE A REPLY

Please enter your comment!
Please enter your name here