






ಪುತ್ತೂರು: ಮಾಯ್ ದೆ ದೇವುಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಸಮಾರಂಭವನ್ನು ಶಾಲಾ ಸಂಚಾಲಕರು, ಮಾಯ್ ದೆ ದೇವುಸ್ ಚರ್ಚ್‌ನ ಪ್ರಧಾನ ಧರ್ಮಗುರು ಅತಿವಂದನೀಯ ಡಾ.ಜೋನ್ ಬ್ಯಾಪ್ಟಿಸ್ಟ್ ಸಲ್ದಾನ್ಹ ರವರು ಸಭಾಧ್ಯಕ್ಷತೆ ವಹಿಸಿ ದೀಪ ಪ್ರಜ್ವಲನೆ ಮಾಡಿ ಯೋಗದ ಭಂಗಿಗಳ ಚಿತ್ರಗಳನ್ನು ಅನಾವರಣಗೊಳಿಸಿ ವಿದ್ಯುಕ್ತ ಚಾಲನೆ ನೀಡಿದರು.


ದಿನನಿತ್ಯದ ಜೀವನದಲ್ಲಿ ಯೋಗದ ಪ್ರಾಮುಖ್ಯತೆ ಹಾಗೂ ಯೋಗದಿಂದ ಆರೋಗ್ಯವು ಉತ್ತಮವಾಗುತ್ತದೆ ಎಂಬುದಕ್ಕೆ ಒಂದು ನೈಜ ಉದಾಹರಣೆಯ ಮೂಲಕ ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಶಾಲಾ ಮುಖ್ಯಶಿಕ್ಷಕಿ ಜಾನೆಟ್ ಡಿಸೋಜಾ, ಹಿರಿಯ ಸಹಶಿಕ್ಷಕ ಸುಬ್ಬರಾಜ ಶಾಸ್ತ್ರಿ, ದೈಹಿಕ ಶಿಕ್ಷಣ ಶಿಕ್ಷಕಿ ಕುಮಾರಿ ಶರಣ್ಯ ಉಪಸ್ಥಿತರಿದ್ದರು.



ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿಯವರು ಸಂಚಾಲಕರಿಗೆ ಗಿಡವನ್ನು ನೆನಪಿನ ಕಾಣಿಕೆಯಾಗಿ ನೀಡಿದರು. ಶಾಲಾ ವಿದ್ಯಾರ್ಥಿಗಳು ನೆರೆದ ಸರ್ವರನ್ನು ಸ್ವಾಗತಿಸಿ ವಂದಿಸಿದರು. ವಿದ್ಯಾರ್ಥಿನಿ ವಂಶಿಕಾ ಜೆ.ಎಸ್. ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿನಿ ರಿದಾ ಫಾತಿಮಾ ಕಾರ್ಯಕ್ರಮ ನಿರ್ವಹಿಸಿದರು.
ಬಳಿಕ ವಿದ್ಯಾರ್ಥಿಗಳು ದೈಹಿಕ ಶಿಕ್ಷಣ ಶಿಕ್ಷಕಿಯವರ ಮಾರ್ಗದರ್ಶನದಂತೆ ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು. ಅಧ್ಯಾಪಕ ವೃಂದದವರು ಸಹಕರಿಸಿದರು.










