ಆಸ್ಪತ್ರೆ ಆವರಣದಲ್ಲಿ ಜಾರಿಬಿದ್ದು ಆಲಂಕಾರು ನಿವಾಸಿ ಸಾವು

0

ಕಡಬ : ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತನ್ನ ಸಹೋದರಿಯ ಆರೋಗ್ಯ ವಿಚಾರಿಸಲು ತೆರಳಿದ್ದ ವ್ಯಕ್ತಿಯೋರ್ವರು ಆಸ್ಪತ್ರೆಯ ಅಂಗಳದಲ್ಲಿ ಜಾರಿ ಬಿದ್ದು ದಾರುಣವಾಗಿ ಸಾವಿಗೀಡಾದ ಘಟನೆ ಬುಧವಾರ ರಾತ್ರಿ ಮಂಗಳೂರಿನಲ್ಲಿ ನಡೆದಿದೆ.


ಆಲಂಕಾರು ಗ್ರಾಮದ ಕೇಪುಳು ನಿವಾಸಿ ಲಿಂಗಪ್ಪ ಪೂಜಾರಿಯವರ ಪುತ್ರ ಶಿವರಾಮ ಕೆ (47ವ.) ಮೃತಪಟ್ಟವರು.


ಮೃತರು ಉಪ್ಪಿನಂಗಡಿ ಸೂರ್ಯ ಆಸ್ಪತ್ರೆಯ ಸ್ಕ್ಯಾನ್ ಸೆಂಟರ್‌ನ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದು, ಬುಧವಾರ ಮಧ್ಯಾಹ್ನದ ವೇಳೆ ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತನ್ನ ಸಹೋದರಿಯ ಆರೋಗ್ಯ ವಿಚಾರಿಸಲೆಂದು ತೆರಳಿದ್ದರು. ಆಸ್ಪತ್ರೆಯಲ್ಲಿ ಸಹೋದರಿಯೊಂದಿಗೆ ಮಾತುಕತೆ ನಡೆಸಿ ಹಿಂತಿರುಗುವ ವೇಳೆ ಆಸ್ಪತ್ರೆಯ ಅಂಗಳದ ಇಂಟರ್‌ಲಾಕ್‌ನಲ್ಲಿ ಹಿಮ್ಮುಖವಾಗಿ ಜಾರಿ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದರು.


ತಕ್ಷಣ ಸ್ಥಳೀಯರು ಸೇರಿ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿ ಮನೆಗೆ ಹಿಂತಿರುಗುವ ದಾರಿ ಮಧ್ಯೆ ಗಾಯಾಳುವಿನ ಆರೋಗ್ಯದಲ್ಲಿ ತೀವ್ರ ಏರುಪೇರಾದ ಹಿನ್ನೆಲೆಯಲ್ಲಿ, ಮತ್ತೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಬುಧವಾರ ರಾತ್ರಿ ವೇಳೆ ಅವರು ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ ಸೇರಿದಂತೆ ತಂದೆ ತಾಯಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here