ಕೆಂಪೇಗೌಡ ಜಯಂತಿ ಪ್ರಯುಕ್ತ ಸ್ಪರ್ಧೆ – ಬೆಟ್ಟಂಪಾಡಿ ಪ್ರಿಯದರ್ಶಿನಿ ವಿದ್ಯಾರ್ಥಿಗಳಿಗೆ ಬಹುಮಾನ

0

ಪುತ್ತೂರು : ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಮತ್ತು ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಆಚರಣೆ ಪ್ರಯುಕ್ತ ಜೂ.25ರಂದು ನಡೆದ ವಿವಿಧ ಸ್ಪರ್ಧೆಗಳಲ್ಲಿ ಬೆಟ್ಟಂಪಾಡಿ ಪ್ರಿಯದರ್ಶಿನಿ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನಗಳನ್ನು ಪಡೆದಿರುತ್ತಾರೆ.

ಪ್ರೌಢಶಾಲಾ ವಿಭಾಗದ ಭಾಷಣ ಸ್ಪರ್ಧೆಯಲ್ಲಿ 9ನೇ ತರಗತಿಯ ಅಭಿನವರಾಜ್ ದ್ವಿತೀಯ ಸ್ಥಾನ, ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಹಾರ್ದಿಕ್ ಡಿ 5ನೇ ತರಗತಿ ದ್ವಿತೀಯ, ಚಿತ್ರಕಲಾ ಸ್ಪರ್ಧೆಯಲ್ಲಿ ಪೂರ್ವಿಕ್ ಎಸ್ 7ನೇ ತರಗತಿ ಪ್ರಥಮ, ಪ್ರಬಂಧ ಸ್ಪರ್ಧೆಯಲ್ಲಿ ಆಪ್ತಿ ಎಸ್ ರೈ ಏಳನೇ ತರಗತಿ ದ್ವಿತೀಯ ಬಹುಮಾನ ಪಡೆದುಕೊಂಡಿರುತ್ತಾರೆ. ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು.

LEAVE A REPLY

Please enter your comment!
Please enter your name here