







ಪುತ್ತೂರು:ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ ಮತ್ತು ಶಾಲಾ ಒಳಾಂಗಣ ಕಾಂಕ್ರೀಟ್ ರಸ್ತೆ,ಶಾಲಾ ಬಯೋ ಗ್ಯಾಸ್ ಸ್ಥಾವರ ಹಾಗೂ ಬಿಸಿನೀರಿನ ಸೋಲಾರ್ ಘಟಕದ ಉದ್ಘಾಟನೆ ಕಾರ್ಯಕ್ರಮ ಜೂ.26ರಂದು ಬೆಳಿಗ್ಗೆ ಗಂಟೆ 10ಕ್ಕೆ ನಡೆಯಲಿದೆ.


ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಅಧ್ಯಕ್ಷ ಶಿಬರ ಜಯರಾಮ ಕೆದಿಲಾಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪುತ್ತೂರಿನ ಓರಿಯೆಂಟಲ್ ಕ್ಯಾಶ್ಯೂ ಇಂಡಸ್ಟ್ರೀಸ್‌ನ ವ್ಯವಸ್ಥಾಪಕ ಪಾಲುದಾರ ವಿಲ್ಪ್ರೆಡ್ ಡಿ’ಸೋಜ,ಪ್ರಗತಿಪರ ಕೃಷಿಕ ಶ್ರೀಧರ ಕೆದಿಲಾಯ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಾಂದೀಪನಿ ಶಿಕ್ಷಣ ಸಂಸ್ಥೆಯ ಪ್ರಕಟಣೆ ತಿಳಿಸಿದೆ.












