







ಈಶ್ವರಮಂಗಲ: ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಸಕ್ತ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಮಂತ್ರಿಮಂಡಲ ರಚನೆಗಾಗಿ ಚುನಾವಣಾ ಪ್ರಕ್ರಿಯೆ ನಡೆಯಿತು.


ವಿದ್ಯಾರ್ಥಿಗಳಲ್ಲಿ ಸಾರ್ವತ್ರಿಕ ಚುನಾವಣಾ ಪ್ರಕ್ರಿಯೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇವಿಎಂ ಮತಯಂತ್ರದ ಮೂಲಕ ಚುನಾವಣೆ ನಡೆಸಲಾಯಿತು.ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನು ಶಾಲಾ ಆಡಳಿತ ಮಂಡಳಿಯ ಕೋಶಾಧಿಕಾರಿ ಸೂರ್ಯನಾರಾಯಣ ಭಟ್ ಬೀರಮೂಲೆ ದೀಪ ಬೆಳಗಿಸಿ ಉದ್ಘಾಟಿಸಿದರು.



ವಿದ್ಯಾರ್ಥಿ ನಾಯಕರು ತಮ್ಮ ಜವಾಬ್ದಾರಿಗಳನ್ನು ತಪ್ಪದೆ ನಿಭಾಯಿಸಬೇಕು, ಶಾಲೆಯಿಂದ ಲಭಿಸುವ ಸೌಲಭ್ಯಗಳನ್ನು ಬಳಸಿಕೊಂಡು ಶಾಲೆಯ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು ಎಂದು ಕರೆ ನೀಡಿದರು.
ನೂತನ ವಿದ್ಯಾರ್ಥಿ ನಾಯಕರು:ಪ್ರೌಢಶಾಲಾ ವಿಭಾಗ – ನಾಯಕ: ಸಾನ್ವಿತ್ ರೈ ,ಉಪ ನಾಯಕ: ಶ್ರೇಯಸ್ ಬಿ.ಕೆ.,ಪ್ರಾಥಮಿಕ ವಿಭಾಗ – ನಾಯಕಿ: ಜ್ಞಾನವಿ ಎ., ಉಪ ನಾಯಕ: ಮನ್ವಿಕ್ ಎಚ್. ಶೆಟ್ಟಿ ಆಯ್ಕೆಯಾದರು.
ಶಾಲಾ ಮುಖ್ಯೋಪಾಧ್ಯಾಯರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸ್ಪೀಕರ್ ಆಗಿ ಆಯ್ಕೆಯಾದ ವಿದ್ಯಾರ್ಥಿ ತನ್ಮಯ್ ಪ್ರಮಾಣ ವಚನ ಸ್ವೀಕರಿಸಿ ಇತರ ನಾಯಕರಿಗೆ ಪ್ರಮಾಣ ವಚನ ಬೋಧಿಸಿದರು.










