ರಾಮಕುಂಜ ಪ.ಪೂ.ಕಾಲೇಜು, ಪ್ರೌಢಶಾಲೆಯಲ್ಲಿ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ರಾಮಕುಂಜೇಶ್ವರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವತಿಯಿಂದ ವಿದ್ಯಾರ್ಥಿಗಳಿಗೆ ಮಾದಕ ವ್ಯಸನ ಮುಕ್ತ ಭಾರತ ಅಭಿಯಾನದಡಿ ಜಾಗೃತಿ ಹಾಗೂ ಕಾನೂನು, ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ಅರಿವು ಕಾರ್ಯಕ್ರಮ ಜೂ.24ರಂದು ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಡಬ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಜಂಬುರಾಜ್ ಅವರು ಮಾದಕ ವ್ಯಸನದ ದುಷ್ಪರಿಣಾಮಗಳು ಹಾಗೂ ಯುವಜನರು ವ್ಯಸನಗಳಿಂದ ದೂರವಿರುವ ಅಗತ್ಯದ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಸಂಪನ್ಮೂಲ ವ್ಯಕ್ತಿ ಪಂಚಾಯರ್ ರಾಜ್ ಸಂಸ್ಥೆಯ ಧನ್ಯಶ್ರೀ ಯವರು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ತಡೆ ಕಾಯ್ದೆ ಕುರಿತು, ಡ್ರಗ್ಸ್ ಮಾರಾಟ ಭಾಗಿಯಾದರೆ ಶಿಕ್ಷೆಗಳು, ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ಮಾಹಿತಿ ನೀಡಿ ಮಾದಕ ವ್ಯಸನ ಮುಕ್ತ ಭಾರತ ಅಭಿಯಾನ ಕುರಿತಾಗಿ ಪ್ರತಿಜ್ಞೆ ಬೋಧಿಸಿದರು.


ಪ್ರೌಢಶಾಲೆಯ ಗಣಿತ ಶಿಕ್ಷಕರಾದ ವೆಂಕಟೇಶ ದಾಮ್ಲೆ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ತಿಲಕಾಕ್ಷ ವಂದಿಸಿದರು. ವಿದ್ಯಾರ್ಥಿನಿ ಸಿಂಚನ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಡಬ ಪೊಲೀಸ್ ಠಾಣೆ ಸಿಬ್ಬಂದಿಗಳು, ಒಕ್ಕೂಟದ ಸಿಬ್ಬಂದಿಗಳು, ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here