ವಿವಿಧ ಸಹಕಾರಿ ಸಂಘಗಳಿಗೆ ಜಮೀನು ಮಂಜೂರಾತಿ : ಕಂದಾಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

0

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಸಹಕಾರಿ ಸಂಘಗಳಿಗೆ ಜಮೀನು ಮಂಜೂರಾತಿ ಮಾಡುವಂತೆ ಕಂದಾಯ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ| ಜಿ ಪರಮೇಶ್ವರ್ ಅವರಿಗೆ ಶಾಸಕ ಅಶೋಕ್ ಕುಮಾರ್ ರೈ ಮನವಿ ಮಾಡಿದ್ದಾರೆ.

ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಪುತ್ತೂರು ನಗರದ ಪಡೀಲು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ 05 ಸೆಂಟ್ಸ್, ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ 3 ಸೆಂಟ್ಸ್ ಹಾಗೂ ಕಬಕ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ 3.50 ಸೆಂಟ್ ಜಾಗ ಮಂಜೂರು ಮಾಡಿಸುವಂತೆ ಈಗಾಗಲೇ ಮನವಿಯನ್ನು ಸಲ್ಲಿಸಿರುತ್ತಾರೆ. ಅನೇಕ ವರ್ಷಗಳಿಂದ ಈ ಮೂರು ಸಹಕಾರಿ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು ಸಾರ್ವಜನಿಕ ಹಿತಾಸಕ್ತಿಯ ಸಂಘಗಳಾಗಿದೆ.

ಸಂಘದ ಅಧೀನದಲ್ಲಿ ಈ ಜಾಗ ಸ್ವಾಧೀನದಲ್ಲಿದ್ದರೂ ಸಂಘದ ಹೆಸರಿಗೆ ಇನ್ನೂ ದಾಖಲುಗೊಂಡಿರುವುದಿಲ್ಲ. ಸರಕಾರ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಶಾಸಕರು ಸಚಿವರಿಗೆ ಮನವಿ ಮಾಡಿದರು. ಶಾಸಕರ ಮನವಿಗೆ ಸ್ಪಂದಿಸಿದ ಸಚಿವರು ಈ ಬಗ್ಗೆ ವರದಿ ಸಿದ್ದಪಡಿಸಲು ಜಿಲ್ಲಾಽಕಾರಿಗೆ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here