ಮಂಗಿಲಪದವು: ಅಕ್ರಮ ಮದ್ಯ ಮಾರಾಟ ಪತ್ತೆ – ಓರ್ವನ ಬಂಧನ

0

ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿರುವ ವಿಟ್ಲ ಠಾಣಾ ಪೊಲೀಸರು ಆತನಿಂದ 4.5 ಲೀಟರ್‌ ಮದ್ಯವನ್ನು ವಶಪಡಿಸಿಕೊಂಡ ಘಟನೆ ವಿಟ್ಲ ಸಮೀಪದ ಮಂಗಿಲಪದವು ಸಮೀಪ ಜೂ.26ರಂದು ನಡೆದಿದೆ.

ವಿಟ್ಲ ಕಸಬಾ ನಿವಾಸಿ ಲಕ್ಷ್ಮಣಗೌಡ (54 ವ.)ಬಂಧಿತ ಆರೋಪಿ. ವಿಟ್ಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಪ್ರಕಾಶ ದೇವಾಡಿಗ ರವರಿಗೆ ವಿಟ್ಲ ಮಂಗಿಲಪದವು ಬಸ್ ತಂಗುದಾಣದ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಈ ದಾಳಿ‌ ನಡೆದಿದೆ. ದಾಳಿಯ ವೇಳೆ ವಿವಿಧ ಮಾದರಿಯ ಒಟ್ಟು 4.5 ಲೀಟರ್‌ ಮದ್ಯ ಹಾಗೂ ಮದ್ಯ ಮಾರಾಟದಿಂದ ಸಂಗ್ರಹವಾದ 300 ರೂಪಾಯಿ ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

LEAVE A REPLY

Please enter your comment!
Please enter your name here