ಸೇಕ್ರೆಡ್ ಹಾರ್ಟ್ ಕಾಲೇಜಿನ ಡಾ| ಈಶ್ವರ ಗೌಡರವರಿಗೆ ಪ್ರೊಫೆಸರ್ ಆಗಿ ಪದೋನ್ನತಿ

0

ರಾಮಕುಂಜ: ಬೆಳ್ತಂಗಡಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ| ಈಶ್ವರ ಗೌಡ.ಪಿ ಅವರು ಕಾಲೇಜು ಶಿಕ್ಷಣ ಇಲಾಖೆಯಿಂದ ಪ್ರೊಫೆಸರ್ ಹುದ್ದೆಗೆ ಬಡ್ತಿ ಪಡೆದಿದ್ದಾರೆ.


ಡಾ| ಈಶ್ವರ ಗೌಡ ರವರು ತಮ್ಮ ಬಿ.ಕಾಂ ಪದವಿಯನ್ನು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪೂರೈಸಿ, ಮಂಗಳೂರು ವಿಶ್ವವಿದ್ಯಾನಿಲಯದಿಂದ ಎಂ.ಕಾಂ ಪದವಿ ಹಾಗೂ ಪಿಎಚ್.ಡಿ ಪದವಿಯನ್ನು ಆಂಧ್ರಪ್ರದೇಶದ ಕುಪ್ಪಂನ ದ್ರಾವಿಡಿಯನ್ ವಿಶ್ವವಿದ್ಯಾನಿಲಯದಿಂದ ಪಡೆದಿದ್ದಾರೆ. ಉಪನ್ಯಾಸಕರ ಅರ್ಹತಾ ಪರೀಕ್ಷೆಯಲ್ಲಿ (NET ಮತ್ತು SLET)ಉತ್ತೀರ್ಣರಾದ ಇವರು 1999ನೇ ಇಸವಿಯಲ್ಲಿ ಸಂತ ಫಿಲೋಮಿನಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದರು.


ಇವರು ಸುಮಾರು 20ಕ್ಕೂ ಹೆಚ್ಚು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪತ್ರಿಕೆಗಳಲ್ಲಿ ಸಂಶೋಧನಾ ಲೇಖನಗಳನ್ನು ಪ್ರಕಟಿಸಿರುತ್ತಾರೆ ಮತ್ತು 25ಕ್ಕೂ ಹೆಚ್ಚು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಸಮ್ಮೇಳನಗಳಲ್ಲಿ ಮತ್ತು ವಿಚಾರ ಸಂಕೀರ್ಣಗಳಲ್ಲಿ ಪ್ರಬಂಧ ಮಂಡಿಸಿರುತ್ತಾರೆ. ಮೂಲತಃ ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ನಿವಾಸಿಯಾಗಿರುವ ಇವರು ಪ್ರಸ್ತುತ ಕಡಬ ತಾಲೂಕು ಕುಂತೂರು ಗ್ರಾಮದ ಶೇಡಿ ಶ್ರೀನಿಧಿಯಲ್ಲಿ ವಾಸವಾಗಿದ್ದಾರೆ.

LEAVE A REPLY

Please enter your comment!
Please enter your name here