







ಪುತ್ತೂರು: ನಾಡಪ್ರಭು ಕೆಂಪೇಗೌಡ ಜಯಂತಿ ದಿನಾಚರಣೆಯ ಅಂಗವಾಗಿ ಪುತ್ತೂರು ತಾಲೂಕು ಮಟ್ಟದಲ್ಲಿ ನಡೆದ ಪ್ರಾಥಮಿಕ ಶಾಲಾ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮುಂಡೂರಿನ 7ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಸುನೈನಾ ಪ್ರಥಮ ಸ್ಥಾನ ಪಡೆದಿರುತ್ತಾರೆ.



ಸರೋಳಿ ಪಂಜಳ ನಿವಾಸಿಗಳಾದ ಶರೀಫುಲ್ಲಾ-ಅನ್ಸಿದಾ ದಂಪತಿಗಳ ಪುತ್ರಿಯಾದ ಸುನೈನಾ, “ನಾಡಪ್ರಭು ಕೆಂಪೇಗೌಡರ ಕೊಡುಗೆ” ವಿಷಯದ ಕುರಿತು ಅತ್ಯುತ್ತಮವಾಗಿ ಪ್ರಬಂಧ ಮಂಡಿಸಿ ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾದರು.












