






ಪುತ್ತೂರು : ವಿದ್ಯಾರ್ಥಿ ಸಂಘಗಳು ವಿದ್ಯಾರ್ಥಿಗಳಿಗೆ ನಾಯಕತ್ವದ ಕೌಶಲ್ಯಗಳನ್ನು ಬೆಳೆಸಲು, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಮತ್ತು ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಕೊಡುಗೆ ನೀಡಲು ವೇದಿಕೆಯನ್ನು ಒದಗಿಸುತ್ತವೆ.ಸಮುದಾಯ ಸೇವಾ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಸಮಾಜಮುಖಿ ಮನೋಭಾವನೆಯನ್ನು ಬೆಳೆಸುತ್ತವೆ.ಈ ನಿಟ್ಟಿನಲ್ಲಿ ವಿದ್ಯಾರ್ಥಿ ಸಂಘಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಅಗತ್ಯವಾದ ವೇದಿಕೆ ಮತ್ತು ಅವಕಾಶಗಳನ್ನು ಒದಗಿಸುತ್ತವೆ.ಎಂದು ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಇದರ ಸಹಾಯಕ ನಿರ್ದೇಶಕರಾದ ಆನಂದ್ರವರು ಹೇಳಿದರು.


ನರೇಂದ್ರ ಪ.ಪೂ.ಕಾಲೇಜಿನಲ್ಲಿ 2026-27 ನೇ ಸಾಲಿನ ನೂತನ ವಿದ್ಯಾರ್ಥಿ ಸಂಘ ಮತ್ತು ವಾಣಿಜ್ಯ, ವಿಜ್ಞಾನ, ಸಾಹಿತ್ಯ ಸಂಘ, ಇಕೋ ಕ್ಲಬ್, ಐಟಿ ಕ್ಲಬ್ ನ ಉದ್ಘಾಟನೆ ಮತ್ತು ೨೦೨೫-೨೬ ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳ ಸನ್ಮಾನ ಮತ್ತು ಅಭಿನಂದನಾ ಸಮಾರಂಭದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.



ಕರ್ತವ್ಯ ಪ್ರಜ್ಞೆಯೊಂದಿಗೆ ಛಲವನ್ನು ಹೊಂದಿ ಕನಸು ಈಡೇರಿಸುವ ಜವಾಬ್ದಾರಿ ಹೊಂದಬೇಕು.ವಿದ್ಯಾರ್ಥಿಗಳು ಆಸಕ್ತಿಯಿಂದ ಕಲಿಕೆಯ ಜೊತೆಗೆ ಬದುಕಿಗೆ ಆಸರೆಯಾಗುವ ಉನ್ನತ ಶಿಕ್ಷಣವನ್ನು ಪಡೆದು ಸಮುದಾಯದ ಏಳಿಗೆಗಾಗಿ ಸಹಕಾರಿಯಾಗಬೇಕಿದೆ.ಸೋಲು ಗೆಲುವು ಶಾಶ್ವತವಲ್ಲ ಎಂಬ ಸತ್ಯದ ಅರಿವಿನೊಡನೆ ಮುನ್ನಡೆಯಿರಿ.ಅವಕಾಶಗಳನ್ನು ಉತ್ತಮ ಅಭಿಲಾಷೆಯೊಂದಿಗೆ ನಿಮ್ಮದಾಗಿಸಿಕೊಳ್ಳಿ ಮತ್ತು ಈ ದೇಶದ ಉತ್ತಮ ನಾಗರಿಕರಾಗಿ ಬಾಳಿ ಎಂದು ಹೇಳಿದರು. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡು ಕಾಲೇಜಿಗೆ ಕೀರ್ತಿ ತಂದ ಎಲ್ಲಾ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಅವರು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಕಾಂತ ಕೊಳತ್ತಾಯ ರವರು ಮಾತನಾಡುತ್ತಾವಿದ್ಯಾಸಂಸ್ಥೆ ಅಂದರೆ ಅಲ್ಲಿ ಶಿಸ್ತಿಗೆ ಪ್ರಮುಖ ಆದ್ಯತೆ.ಅಲ್ಲಿನ ನೀತಿ ,ನಿಯಮಗಳಿಗೆ ಬದ್ಧರಾಗಿರಬೇಕು .ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮತ್ತು ಅನುಶಾಸನ ತುಂಬಾ ಮುಖ್ಯ .ನಮ್ಮ ಜೀವನಕ್ರಮ ಸರಿಯಾದ ರೀತಿಯಲ್ಲಿದ್ದರೆ ನಮ್ಮ ಭವಿಷ್ಯ ಉತ್ತಮವಾಗಿರುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಸಂಘವು ಹೆಜ್ಜೆ ಹಾಕಬೇಕು .ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಎನ್ನುವುದು ಒಂದು ಪ್ರಯಾಣ. ಸ್ಪಷ್ಟ ಗುರಿಗಳನ್ನು ಹೊಂದಿಸುವ ಮೂಲಕ, ಸಮಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಮೂಲಕ, ಕಲಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಮತ್ತು ಬೆಳವಣಿಗೆಯ ಮನಸ್ಥಿತಿಯನ್ನು ಅಳವಡಿಸಿಕೊಳ್ಳುವ ಮೂಲಕ, ವಿದ್ಯಾರ್ಥಿಗಳು ಉಜ್ವಲ ಭವಿಷ್ಯಕ್ಕೆ ದಾರಿ ಮಾಡಿಕೊಡಬಹುದು.ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ರವರು ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ, ರಾಷ್ಟ್ರೀಯ ಭಾವೈಕ್ಯತೆಯ ಭಾವನೆಗಳನ್ನು ವಿದ್ಯಾರ್ಥಿಗಳಲ್ಲಿ ಉದ್ದೀಪನಗೊಳಿಸುವುದರ ಜೊತೆಗೆ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ದಿಟ್ಟವಾಗಿ ಎದುರಿಸಲು ಈ ರೀತಿಯ ವಿದ್ಯಾರ್ಥಿ ಸಂಘವು ವೇದಿಕೆಯನ್ನು ಕಲ್ಪಿಸುತ್ತದೆ.ವಿದ್ಯಾರ್ಥಿ ಜೀವನವು ಅವಕಾಶಗಳು, ಬೆಳವಣಿಗೆ ಮತ್ತು ಉಜ್ವಲ ಭವಿಷ್ಯವನ್ನು ರೂಪಿಸುವ ಸಾಮರ್ಥ್ಯದಿಂದ ತುಂಬಿರುವ ಒಂದು ಗಮನಾರ್ಹ ಹಂತವಾಗಿದೆ.ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಪಡೆಯಲು, ಶಿಸ್ತು, ಸ್ಪಷ್ಟ ಗುರಿಗಳು, ಮತ್ತು ಸಕಾರಾತ್ಮಕ ಮನೋಭಾವ ಮುಖ್ಯ. ಶೈಕ್ಷಣಿಕ ಸಾಧನೆ ಜೊತೆಗೆ ಜೀವನ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಸಹ ಅಷ್ಟೇ ಮುಖ್ಯ.ಪಿಯುಸಿ ಎನ್ನುವುದು ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಿನ ಘಟ್ಟ.ಇಲ್ಲಿ ಯಶಸ್ಸು ಸಾಧಿಸಿದರೆ ಮುಂದೆ ಸುಲಭವಾಗಿ ಗುರಿ ಮುಟ್ಟಬಹುದು.ಎಂದು ಹೇಳಿದರು.
ವೇದಿಕೆಯಲ್ಲಿನರೇಂದ್ರ ಪ.ಪೂ.ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಸಂತೋಷ ಬಿ.,ಕೋಶಾಧಿಕಾರಿಗಳಾದ ಸಂಪತ್ಕುಮಾರ್, ಸದಸ್ಯರಾದ ಶ್ರೀಮತಿ ಮೋಹಿನಿ ದಿವಾಕರ, ಸೂರ್ಯನಾಥ ಆಳ್ವ, ವಿದ್ಯಾರ್ಥಿ ಸಂಘದ ನಾಯಕನಾದ ದ್ವಿತೀಯ ವಿಜ್ಞಾನ ವಿಭಾಗದ ಶ್ರೀಶನ್ ಡಿ.ಕೆ.,ಕಾರ್ಯದರ್ಶಿಯಾದ ದ್ವಿತೀಯ ವಿಜ್ಞಾನ ವಿಭಾಗದ ಕು.ಕನ್ನಿಕ,ಜೊತೆ ಕಾರ್ಯದರ್ಶಿಯಾದ ಪ್ರಥಮ ವಿಜ್ಞಾನ ವಿಭಾಗದ ಕು.ಶೃಜ, ಕ್ರೀಡಾ ಸಂಘದ ಅಧ್ಯಕ್ಷರಾದ ದ್ವಿತೀಯ ವಿಜ್ಞಾನ ವಿಭಾಗದ ಶ್ರೀಶ ಕುಮಾರ್ ಮತ್ತು ಕಾರ್ಯದರ್ಶಿಯಾದ ದ್ವಿತೀಯ ವಿಜ್ಞಾನ ವಿಭಾಗದ ಪಿ.ಯಶಸ್ವಿ ನಾಯಕ್ ಉಪಸ್ಥಿತರಿದ್ದರು.ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನವನ್ನು ಉಪನ್ಯಾಸಕರಾದ ಕಾರ್ತಿಕ್ ಕುಮಾರ್ ಇವರು ಬೋಧಿಸಿದರು.
ವಿದ್ಯಾರ್ಥಿ ಸಂಘದ ಎಲ್ಲಾ ಪದಾಧಿಕಾರಿಗಳು ಕಾಲೇಜಿನ ನಿಯಮಗಳಿಗೆ ಶಾಸನಗಳಿಗೆ ಬದ್ಧರಾಗಿ ಪಾಲನೆ ಮಾಡುತ್ತೇವೆ ಮತ್ತು ಕಾಲೇಜಿನ ಅಭಿವೃದ್ಧಿಗಾಗಿ ಪ್ರಗತಿಗಾಗಿ ಶ್ರಮಿಸುತ್ತೇವೆಎಂದು ಪ್ರತಿಜ್ಞೆಯನ್ನು ಮಾಡಿದರು.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರ್ಯಾಂಕ್ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳನ್ನೂ ಅಭಿನಂದಿಸಲಾಯಿತು. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡ ಒಟ್ಟು 45 ವಿದ್ಯಾರ್ಥಿಗಳ ವಿವರಗಳನ್ನು ಉಪನ್ಯಾಸಕರಾದ ಶ್ರೀಮತಿ ರುಚಿತಾ ಕೃಷ್ಣ ನೀಡಿದರು. ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ 600 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಾದ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಲಿಖಿತ್ ಕೆ.,ದರ್ಶಿನಿ ಎಮ್., ಪೃಥಾದಯಾನಂದ್, ಕುಶಿತಾ ಬಿ.,ತನ್ವಿತಾಎಮ್.,ಲಿಖಿತಾ ಡಿ.ಬಿ., ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಸಿಂಚನಾ ಭಟ್.ಇವರನ್ನು ಅಭಿನಂದಿಸಲಾಯಿತು.
ಅಭಿನಂದನೆಗೆ ಪಾತ್ರರಾದ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸುತ್ತಾ ಪೋಷಕರು,ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಬೆಂಬಲದಿಂದ ಮತ್ತು ಸತತ ಪರಿಶ್ರಮದಿಂದ ಈ ಸಾಧನೆ ಸಾಧ್ಯವಾಯಿತು ಎಂದು ಹೇಳಿದರು.ಉಪನ್ಯಾಸಕರಾದ ರೇಣುಕಾ ಕಾರ್ಯಕ್ರಮವನ್ನು ನಿರೂಪಿಸಿದರು.










